- ಪುತ್ತೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅರ್ಚನಾ.ಎಸ್ 90 % ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಈಕೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಗುರುಗಳಾದ ವಿದ್ವಾನ್ ದೀಪಕ್ ಕುಮಾರ್, ವಿದುಷಿ ಪ್ರೀತಿ ಕಲಾ, ಹಾಗೂ ವಿದ್ವಾನ್ ಗಿರೀಶ್ ಕುಮಾರ್ ಇವರ ಶಿಷ್ಯಯಾಗಿದ್ದು ಪ್ರಸ್ತುತ ಉದನೆಯ ಬಿಷಪ್ ಪೋಲಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಈಕೆ ಶಿರಾಡಿ ಗ್ರಾಮದ ಸಂಪ್ಯಾಡಿ ಯ ಸುದರ್ಶನ್ ಕುಮಾರ್ ಹಾಗೂ ರಮ್ಯಾ ಸುದರ್ಶನ್ ದಂಪತಿಯ ಪುತ್ರಿ.