ಅಧ್ಯಕ್ಷರಾಗಿ ಪ್ರಕಾಶ್ಚಂದ್ರ ರೈ ಕೈಕಾರ, ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಭಟ್ ಅವಿರೋಧ ಆಯ್ಕೆ
ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಂದಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಪ್ರಕಾಶ್ಚಂದ್ರ ರೈ ಕೈಕಾರ ಹಾಗೂ ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ಭಟ್ ಬೀರಮೂಲೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ.15 ರಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಈ ಅವಿರೋಧ ಆಯ್ಕೆಯನ್ನು ಮಾಡಲಾಯಿತು. ಚುನಾವಣಾ ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್ ಘೋಷಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ಉಮೇಶ್ ಗೌಡ, ವಿನೋದ್ ಶೆಟ್ಟಿ ಅರಿಯಡ್ಕ, ಅಮರನಾಥ ರೈ, ಶಿವರಾಮ ಬಿ, ಸತೀಶ್ ಕರ್ಕೆರ, ಶ್ರೀನಿವಾಸ ಪ್ರಸಾದ್ ಎಂ, ವಸಂತ ಕುಮಾರ್, ರಾಜೀವಿ ಎಸ್.ರೈ, ಮಲ್ಲಿಕಾ ಎ.ಜೆ, ಸಂತೋಷ್ ಎ.ಸಿ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್ ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿಗಳಾದ ವೀಣಾ ರೈ, ರಾಜ್ಪ್ರಕಾಶ್ ರೈ, ಉದಯ ಕುಮಾರ್, ರಾಜ್ಕಿರಣ್ ರೈ, ಭರತ್, ಶಾಂತಕುಮಾರ್, ವೆಂಕಪ್ಪ ಡಿ, ಹರೀಶ್ ಎ, ಹರ್ಷಿತಾ, ಪ್ರೀತಿ, ಪ್ರದ್ವಿನ್ ಪ್ರಸಾದ್, ಶರತ್ ಸಹಕರಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾ ರಿಟರ್ನಿಂಗ್ ಅಧಿಕಾರಿ ಶೋಭಾ ಎನ್.ಎಸ್ರವರಿಗೆ ಸಹಕಾರ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಿಜೆಪಿ, ಸಹಕಾರ ಭಾರತಿಯಿಂದ ಅಭಿನಂದನೆ ಸಲ್ಲಿಕೆ
ಭಾರತೀಯ ಜನತಾ ಪಾರ್ಟಿಯ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳಾಗಿ ಜಯಗಳಿಸಿ ಪ್ರಸ್ತುತ ಅಧ್ಯಕ್ಷ, ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಕಾಶ್ಚಂದ್ರ ರೈ ಕೈಕಾರ ಮತ್ತು ಸೂರ್ಯನಾರಾಯಣ ಭಟ್ ಬೀರಮೂಲೆಯವರಿಗೆ ಬಿಜೆಪಿ,ಸಹಕಾರ ಭಾರತಿ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು. ಸಭೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಕರಾವಳಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಗ್ರಾಮಾಂತರ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಸಹಕಾರ ಭಾರತಿ ತಾಲೂಕು ಕಾರ್ಯದರ್ಶಿ ಮೋಹನ್ ಪಕ್ಕಳ, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು, ನೆ.ಮುಡ್ನೂರು ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಶ್ ರೈ ಪರ್ಪುಂಜ, ಒಳಮೊಗ್ರು ಬಿಜೆಪಿ ಶಕ್ತಿ ಕೇಂದ್ರದ ಸಂಚಾಲಕ ಎಸ್.ಮಾಧವ ರೈ ಕುಂಬ್ರ, ಬಿಜೆಪಿ ಗ್ರಾಮಾಂತರ ಮಂಡಲ ಕಾರ್ಯದರ್ಶಿ ರತನ್ ರೈ ಕುಂಬ್ರ, ಅರಿಯಡ್ಕ ಗ್ರಾಪಂ ಅಧ್ಯಕ್ಷ ಸಂತೋಷ್ ಮಣಿಯಾಣಿ, ಸದಸ್ಯ ಹರೀಶ್ ರೈ ಜಾರತ್ತಾರು, ಒಳಮೊಗ್ರು ಗ್ರಾಪಂ ಸದಸ್ಯ ಪ್ರದೀಪ್, ಪ್ರಮುಖರಾದ ತಿಲಕ್ ರೈ ಕುತ್ಯಾಡಿ, ಸಚಿನ್ ರೈ ಪಾಪೆಮಜಲು, ಉಷಾ ನಾರಾಯಣ್, ಸಂತೋಷ್ ರೈ ಕೈಕಾರ, ರಾಮಕೃಷ್ಣ ನಾಯ್ಕ, ಯುವರಾಜ್ ಪೂಂಜಾ ಗೋಳ್ತಿಲ, ಜಯರಾಮ ಆಚಾರ್ಯ, ಪ್ರವೀಣ್ ರೈ ಪನೆಕ್ಕಳ, ಗಣೇಶ್ ಶೇಖಮಲೆ, ರಮೇಶ್ ನೀರ್ಪಾಡಿ, ಲಿಂಗಪ್ಪ ಗೌಡ ಸಹಿತ ಹಲವು ಮಂದಿ ಉಪಸ್ಥಿತರಿದ್ದು ಅಧ್ಯಕ್ಷ, ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.
3 ನೇ ಬಾರಿಗೆ ಪ್ರಕಾಶ್ಚಂದ್ರ ರೈ ಅಧ್ಯಕ್ಷರಾಗಿ ಆಯ್ಕೆ
ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಪ್ರಕಾಶ್ಚಂದ್ರ ರೈ ಕೈಕಾರರವರು 3 ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 2010ರಲ್ಲಿ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಸಂಘಕ್ಕೆ ಪಾದಾರ್ಪಣೆ ಮಾಡಿದ ಇವರು 4 ನೇ ಬಾರಿಗೆ ನಿರ್ದೇಶಕರಾಗಿ ಹಾಗೇ 3 ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಕೈಕಾರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು ಓರ್ವ ಪ್ರಗತಿಪರ ಕೃಷಿಕರಾಗಿ ರಾಜಕೀಯ, ಧಾರ್ಮಿಕ, ಸಾಮಾಜಿಕ ಹಾಗೇ ಶೈಕ್ಷಣಿಕವಾಗಿಯೂ ತೊಡಗಿಸಿಕೊಂಡಿದ್ದು ಹತ್ತು ಹಲವು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಓರ್ವ ಹಿರಿಯ ಸಹಕಾರಿ ಧುರೀಣರಾಗಿದ್ದಾರೆ.
“ ಎಲ್ಲಾ ಕೃಷಿಕ ಬಾಂಧವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮುಂದಿನ ದಿನಗಳಲ್ಲಿ ಸಂಘದ ಸಂಪೂರ್ಣ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಈಗಾಗಲೇ ಸುಳ್ಯಪದವುನಲ್ಲಿ ಸಂಘದ ಶಾಖೆಯ ಕಟ್ಟಡದ ಕಾಮಗಾರಿ ಭರದಿಂದ ನಡೆಯುತ್ತಿದೆ. ಬಡಗನ್ನೂರುನಲ್ಲಿಯೂ ಶಾಖೆ ಆರಂಭಿಸುವ ಯೋಜನೆ ಇದೆ. ಅರಿಯಡ್ಕದಲ್ಲಿ ಗೊಬ್ಬರ ದಾಸ್ತಾನು ಕೇಂದ್ರ ಮಾಡಲು ಜಾಗ ಖರೀದಿಸುವ ಬಗ್ಗೆ ಯೋಚನೆ ಇದೆ. ರಾಸಾಯನಿಕ ಗೊಬ್ಬರ ಖರೀದಿಯಲ್ಲಿ ರೈತರಿಗೆ 75 ದಿನಗಳವರೇಗೆ ಬಡ್ಡಿ ರಹಿತ ಸಾಲ ನೀಡುವ ಯೋಜನೆ ಹಾಗೇ ಸಂಘದಿಂದ ರೈತರಿಗೆ ದೊರೆಯುವ ಎಲ್ಲಾ ಸೌಲಭ್ಯಗಳ ಜೊತೆಯಲ್ಲಿ ಸಾಧ್ಯವಾಗುವ ಎಲ್ಲಾ ರೀತಿಯ ಸಹಕಾರವನ್ನು ಕೊಡಲು ಬದ್ಧನಾಗಿದ್ದೇನೆ. ಮರಣ ಸಾಂತ್ವನ ನಿಧಿ ಸೇರಿದಂತೆ ಪ್ರಸ್ತುತ ಇರುವ ಎಲ್ಲಾ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಮೂಲಕ ಅಭಿವೃದ್ಧಿಗೆ ಸರ್ವರ ಸಹಕಾರವನ್ನು ಬಯಸುತ್ತೇವೆ.”
ಪ್ರಕಾಶ್ಚಂದ್ರ ರೈ ಕೈಕಾರ, ಅಧ್ಯಕ್ಷರು ಕುಂಬ್ರ ಪ್ರಾ.ಕೃ.ಪ.ಸ.ಸಂಘ
“ ಕುಂಬ್ರ ಹಾಗೂ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳು ಜಯ ಗಳಿಸಿ, ಆಡಳಿತ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರುಗಳಾಗಿ ಅಧಿಕಾರ ಪಡೆದುಕೊಂಡಿರುವುದು ಖುಷಿ ತಂದಿದೆ. ಸಹಕಾರ ಭಾರತಿಯ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿದ ಸಮಸ್ತ ಕಾರ್ಯಕರ್ತ ಬಂಧುಗಳಿಗೆ, ಪಕ್ಷದ ಮುಖಂಡರುಗಳಿಗೆ ಹಾಗೇ ರೈತಾಪಿ ಜನರಿಗೆ ಬಿಜೆಪಿ ವತಿಯಿಂದ ಧನ್ಯವಾದಗಳನ್ನು ಅರ್ಪಿಸುತ್ತೇವೆ.”
ರಾಜೇಶ್ ರೈ ಪರ್ಪುಂಜ, ಅಧ್ಯಕ್ಷರು, ಬಿಜೆಪಿ ಮಹಾಶಕ್ತಿ ಕೇಂದ್ರ ನೆಟ್ಟಣಿಗೆ ಮುಡ್ನೂರು