ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ – ವೇಗದ ನಡಿಗೆಯಲ್ಲಿ ಶೆಟ್ಟಿಮಜಲು ದಿನೇಶ್ ಆಚಾರ್ಯರಿಗೆ ಬೆಳ್ಳಿ ಪದಕ

0

ಪುತ್ತೂರು: ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜ.10ರಿಂದ 12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರಗಿದ ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ದಿನೇಶ್ ಆಚಾರ್ಯ ( ದಿ. ನಾರಾಯಣ ಆಚಾರ್ಯ ಮತ್ತು ವಸಂತಿ ನಾರಾಯಣ ಆಚಾರ್ಯ ದಂಪತಿಗಳ ಪುತ್ರ) 40ರ ವಯೋಮಾನದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, 5 ಕಿ.ಮೀ ವೇಗದ ನಡಿಗೆ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ. 400 ಮೀ ಹಾಗೂ 800ಮೀ ಓಟಗಳಲ್ಲಿ ಭಾಗವಹಿಸಿರುತ್ತಾರೆ.

ದಿನೇಶ್ ಆಚಾರ್ಯ ನರಿಮೊಗರು ಗ್ರಾಮದ ಶೆಟ್ಟಿಮಜಲು ನಿವಾಸಿಯಾಗಿದ್ದು, ಪ್ರಸ್ತುತ ಬೊಳ್ವಾರು ಪ್ರಗತಿ ಆಸ್ಪತ್ರೆಯಲ್ಲಿ ಅಕೌಂಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಕ್ರೀಡಾಕೂಟದಲ್ಲಿ ಭಾರತ ಮಾತ್ರವಲ್ಲದೇ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಭೂತಾನ್ ದೇಶಗಳ ವಿವಿಧ ವಯೋಮಾನಗಳ 1700ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದರು. ಇವರು ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಲ್ಪಣೆ ಸರಕಾರಿ ಪ್ರೌಢಶಾಲೆ, ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಮತ್ತು ವಿವೇಕಾನಂದ ಮಹಾವಿದ್ಯಾಲಯಗಳ ಹಿರಿಯ ವಿದ್ಯಾರ್ಥಿ.

LEAVE A REPLY

Please enter your comment!
Please enter your name here