ಬಡಗನ್ನೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ.ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಗ್ರಾ.ಪಂ ಉಪಾಧ್ಯಕ್ಷ ರಾಮ ಮೇನಾ ರವರು ದೀಪ ಬೆಳಗಿಸಿ ಚಾಲನೆ ನೀಡಿ ಶುಭಹಾರೈಸಿದರು.
ಸಂಪನ್ಮೂಲ ವ್ಯಕ್ತಿ ತಾ.ಪಂ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು, ಮಕ್ಕಳಿಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಈಶ್ವರಮಂಗಲ ಒಕ್ಕೂಟದ ಉಪಾಧ್ಯಕ್ಷೆ ಯಶೋಧ, ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ವನಿತಾ ಸ್ವಾಗತಿಸಿ, ವಂದಿಸಿದರು. ಮೇನಾಲ ಕಾರ್ಯ ವ್ಯಾಪ್ತಿಯ ಸೇವಾಪ್ರತಿನಿಧಿ ಸುಂದರ್ ಜಿ ನಿರೂಪಿಸಿದರು.