ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ಶಿಬಿರ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಹಾಗೂ ಆಟೋ ಮೊಬೈಲ್ ಭಾಗದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ತಂತ್ರಜ್ಞಾನದ ಜೊತೆಗೆ ಆರೋಗ್ಯವನ್ನು ಕಾಪಾಡುವುದು ಹೇಗೆ ಎಂಬ ವಿಷಯವಾಗಿ ಮಾಹಿತಿಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಗಾರದಲ್ಲಿ ವಿವೇಕಾನಂದ ಲಾ ಕಾಲೇಜಿನ ದೈಹಿಕ ಶಿಕ್ಷಕರಾದ ನವೀನ್ ಕುಮಾರ್ ಎಂ.ಕೆ ವಿಷಯದ ಬಗ್ಗೆ ಮಾಹಿತಿ ನೀಡುತ್ತಾ ತಂತ್ರಜ್ಞಾನವನ್ನು ಪಡೆಯುವುದರ ಜೊತೆಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ. ಉತ್ತಮ ಜ್ಞಾನಾರ್ಜನೆಗಾಗಿ ಮನಸ್ಸನ್ನು ಕೇಂದ್ರೀಕರಿಸಲು ಯೋಗ, ಧ್ಯಾನ ಮುಂತಾದವುಗಳು ಬಹಳಉಪಯುಕ್ತ ಎಂಬುದಾಗಿ ತಿಳಿಸಿಕೊಟ್ಟರು.

LEAVE A REPLY

Please enter your comment!
Please enter your name here