ಉಪ್ಪಿನಂಗಡಿ : ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್.ಜಿ.ಎಫ್.ಐ) ವತಿಯಿಂದ ಆಂಧ್ರಪ್ರದೇಶದ ವಿಜಯವಾಡದಲ್ಲಿ ಜನವರಿ 01 ರಿಂದ 10 ರವರೆಗೆ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾಭಾರತಿಯನ್ನು ಪ್ರತಿನಿಧಿಸಿದ 19ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಇಲ್ಲಿನ ಇಂದ್ರಪ್ರಸ್ಥ ವಿದ್ಯಾಲಯದ 10ನೇ ತರಗತಿಯ ಪ್ರಾಪ್ತಿ ಪಿ ಶೆಟ್ಟಿ, 9ನೇ ತರಗತಿಯ ಅನ್ವಿ ಆರ್ ಆಚಾರ್ಯ ಹಾಗೂ ಸವ್ಯ ಎಂ ಭಾಗವಹಿಸಿ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.
ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಗೋಪಿನಾಥ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ವಿದ್ಯಾ ಹಾಗೂ ಶ್ರೀರಂಜಿನಿ ತರಬೇತಿ ನೀಡಿರುತ್ತಾರೆ ಎಂದು ಸಂಸ್ಥೆಯ ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.