puttur:ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಧ್ರುವಿ.ಎನ್ ರೈ ಶೇ. 79.5 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಈಕೆ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಗುರುಗಳಾದ ವಿದ್ವಾನ್ ದೀಪಕ್ ಕುಮಾರ್, ವಿದ್ವಾನ್ ಗಿರೀಶ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಇವರ ಶಿಷ್ಯೆಯಾಗಿದ್ದು, ಪ್ರಸ್ತುತ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈಕೆ ನಾಗೇಶ್ ರೈ ಮತ್ತು ಲಕ್ಷ್ಮಿ ರೈ ದಂಪತಿಗಳ ಪುತ್ರಿ.