ಪೆರುವಾಜೆ : ಭಾರತವರ್ಷಿಣಿ ಯಕ್ಷಗಾನ ಬಯಲಾಟ ಪ್ರದರ್ಶನ

0

ಹಿರಿಯ ಯಕ್ಷಗಾನ ಕಲಾವಿದ ಕುಮಾರ ಸುಬ್ರಹ್ಮಣ್ಯ ಭಟ್ ವಳಕುಂಜ ಅವರಿಗೆ ಪಟ್ಲ ಗುರು-2025 ಗೌರವ ಸಮರ್ಪಣೆ

ಪುತ್ತೂರು: : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆಯ ಪ್ರಯುಕ್ತ ಜ. 18 ರಂದು ರಾತ್ರಿ ಪಾವಂಜೆ ಮೇಳದವರಿಂದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶನಿವಾರ ರಾತ್ರಿ ಭಾರತವರ್ಷಿಣಿ ಯಕ್ಷಗಾನ ಬಯಲಾಟ ನಡೆಯಿತು.

ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಸುಳ್ಯ ತಾಲೂಕು ಘಟಕದ ವತಿಯಿಂದ ಹಿರಿಯ ಯಕ್ಷಗಾನ ಕಲಾವಿದ ಹಿರಿಯ ಯಕ್ಷಗಾನ ಕಲಾವಿದ ಕುಮಾರ ಸುಬ್ರಹ್ಮಣ್ಯ ಭಟ್ ವಳಕುಂಜ ಅವರಿಗೆ ಪಟ್ಲ ಗುರು-2025 ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕ ಸತೀಶ್ ಶೆಟ್ಟಿ ಪಟ್ಲ, ಪೆರುವಾಜೆ ಗ್ರಾ.ಪಂ.ಮಾಜಿ‌ ಉಪಾಧ್ಯಕ್ಷ ಸುನಿಲ್ ರೈ ಪೆರುವಾಜೆ ಶುಭ ಹಾರೈಸಿದರು.

ಯಕ್ಷಧ್ರುವ ಪಟ್ಲ ಫೌಂಡೇಷನ್ ಸುಳ್ಯ ತಾಲೂಕು ಘಟಕದ ಗೌರವಾಧ್ಯಕ್ಷ ಕುಂಬ್ರ ದಯಾಕರ ಆಳ್ವ, ಅಧ್ಯಕ್ಷ ಪ್ರೀತಂ ರೈ ಪೆರುವಾಜೆ, ಕಾರ್ಯದರ್ಶಿ ಸುರೇಶ್ ರೈ ಅಗಲ್ಪಾಡಿ, ಉದ್ಯಮಿ ಮಿಥುನ್ ಶೆಣೈ, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಅಧ್ಯಕ್ಷೆ ಉಷಾದೇವಿ ಮೊದಲಾದವರು ಉಪಸ್ಥಿತರಿದ್ದರು. ಶಿವಪ್ರಸಾದ್ ಪೆರುವಾಜೆ ಸಮ್ಮಾನಪತ್ರ ವಾಚಿಸಿದರು. ಶಿಕ್ಷಕ ಲಿಂಗಪ್ಪ ಬೆಳ್ಳಾರೆ ನಿರೂಪಿಸಿದರು.

LEAVE A REPLY

Please enter your comment!
Please enter your name here