ಪುತ್ತೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಎರಡು ದಿನ ನಡೆದ ಅಖಿಲ ಕರ್ನಾಟಕ ಮಹಾಸಭಾದ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಪುತ್ತೂರಿನ ಮುಳಿಯ ಜ್ಯುವೆಲ್ಸ್ನ ಸಿಎಂಡಿ ಕೇಶವಪ್ರಸಾದ್ ಮುಳಿಯ ಅವರಿಗೆ ಬ್ರಹ್ಮತೇಜ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 51 ಸಾಧಕರನ್ನು ಸ್ವರ್ಣ ಮಹೋತ್ಸವ ಸಂದರ್ಭದಲ್ಲಿ ಗುರುತಿಸಿ ಗೌರವಿಸಲಾಯಿತು. ಈ ಪೈಕಿ, ಹಿಂದೂ ಧಾರ್ಮಿಕ ಶಿಕ್ಷಣ ಪ್ರಾರಂಭ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಸಾಧನೆಯೊಂದಿಗೆ ನೂರಾರು ಜನರಿಗೆ ಉದ್ಯೋಗ ನೀಡಿರುವುದನ್ನು ಪರಿಗಣಿಸಿ ಕೇಶವಪ್ರಸಾದ್ ಮುಳಿಯ ಅವರಿಗೆ ’ಬ್ರಹ್ಮತೇಜ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಸಹಿತ ಹಲವಾರು ಮಂದಿ ಗಣ್ಯರು ಈ ಪ್ರಶಸ್ತಿಯನ್ನು ನೀಡಿದರು.