ಉಪ್ಪಿನಂಗಡಿ: ಇಲ್ಲಿನ ಗಾಂಧಿಪಾರ್ಕ್ ನಿವಾಸಿ ಅಬ್ದುಲ್ ಬಶೀರ್ (52) ಎಂಬವರು ಕೆಲ ದಿನಗಳ ಅನಾರೋಗ್ಯದಿಂದ ಜ.19ರಂದು ರಾತ್ರಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಉಪ್ಪಿನಂಗಡಿಯಲ್ಲಿ ಅಟೋ ರಿಕ್ಷಾ ಚಾಲಕರಾಗಿದ್ದ ಅಬ್ದುಲ್ ಬಶೀರ್ ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.