ಮಾದೇರಿ ಒಕ್ಕೂಟದ ತ್ರೈಮಾಸಿಕ ಸಭೆ

0

ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯದ ಮಾದೇರಿ ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷ ಸೆಬಾಸ್ಟಿಯನ್ ಪಿ.ಜೆ.ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ವಲಯ ಮೇಲ್ವಿಚಾರಕರಾದ ಆನಂದ ಡಿ.ಬಿ.ಅವರು ಮಾಹಿತಿ ಮಾರ್ಗದರ್ಶನ ನೀಡಿದರು. ಬಿಳಿನೆಲೆಯಲ್ಲಿ ನಡೆದ ತಾಲೂಕು ಮಟ್ಟದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದ ಮಾದೇರಿ ಬೃಂದಾವನ ಜ್ಞಾನವಿಕಾಸ ಸಂಘದ ಸದಸ್ಯರನ್ನು ಅಭಿನಂದಿಸಲಾಯಿತು.

ಒಕ್ಕೂಟದ ಸದಸ್ಯರು ಹಾಗೂ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಜೇತರಾದ ಕೇಶವ ನೆಲ್ಯಾಡಿ ಇವರನ್ನು ಕೂಡ ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು. ಒಕ್ಕೂಟದ ಕಾರ್ಯದರ್ಶಿ ಕಮಲಾಕ್ಷ ಬಿ, ಜೊತೆ ಕಾರ್ಯದರ್ಶಿ ಪ್ರಿಯ, ಪದಾಧಿಕಾರಿಗಳು ಹಾಗೂ ಸೇವಾ ಪ್ರತಿನಿಧಿಗಳಾದ ಸಂತೋಷ್ ಕೆ.ಎಂ., ಕವಿತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here