ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜ.22ರಂದು ಬೆಳಗ್ಗೆ 11.30 ಕ್ಕೆ ಪತ್ರಿಕಾ ಭವನದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಲ್ಯಾಂಡ್ಲಿಂಕ್ಸ್ ಸಂಸ್ಥೆಯ ಚೇರ್ಮನ್ ಮತ್ತು ಸಿಇಒ ಕೃಷ್ಣ.ಜೆ.ಪಾಲೆಮಾರ್ ಭಾಗವಹಿಸಲಿದ್ದಾರೆ. ಕಲಾವಿದ, ನಮ್ಮಕುಡ್ಲದ ಸಿಇಒ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಅಧ್ಯಕ್ಷತೆಯನ್ನು ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್ ರೈ ವಹಿಸಲಿದ್ದಾರೆ. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿರಲಿದ್ದಾರೆ.