ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆ- ಸಾನ್ವಿ ಡಿ ವಿಶಿಷ್ಟಶ್ರೇಣಿಯಲ್ಲಿ ಉತ್ತೀರ್ಣ

0

ಪುತ್ತೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾಲಯ ಮೈಸೂರು, ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಸಾನ್ವಿ ಡಿ ಶೇ. 81.8 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಸಾನ್ವಿ ಪುತ್ತೂರಿನ ಶ್ರೀ ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ಗುರುಗಳಾದ ವಿದ್ವಾನ್ ದೀಪಕ್ ಕುಮಾರ್, ವಿದ್ವಾನ್ ಗಿರೀಶ್ ಕುಮಾರ್ ಮತ್ತು ವಿದುಷಿ ಪ್ರೀತಿಕಲಾ ಇವರ ಶಿಷ್ಯೆಯಾಗಿದ್ದು, ಪ್ರಸ್ತುತ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈಕೆ ಕೂರ್ನಡ್ಕ ದೀಪಕ್ ಮತ್ತು ಯಶೋದಾ ದಂಪತಿಗಳ ಪುತ್ರಿ.

LEAVE A REPLY

Please enter your comment!
Please enter your name here