ಪುತ್ತೂರು: ಇತಿಹಾಸ ಪ್ರಸಿದ್ದ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದ ವಾರ್ಷಿಕ ಜಾತ್ರೆ ಜ.21 ರಂದು ರಾತ್ರಿ ಸಂಪನ್ನಗೊಂಡಿತು. ಶ್ರೀ ಕಲ್ಲುರ್ಟಿ-ಕಲ್ಕುಡ ದೈವಗಳಿಗೆ ನೇಮ ನಡೆಯಿತು.
ಸಾವಿರಕ್ಕೂ ಅಧಿಕ ಮಂದಿ ಭಕ್ತರು ಭಾಗವಹಿಸಿದರು. ರಾತ್ರಿ ಅನ್ನದಾನ ನಡೆಯಿತು. ದೇವಾಲಯದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರುಗಳು, ಮಾಜಿ ಸದಸ್ಯರುಗಳು, ದೇವಾಲಯದ ಕಚೇರಿ ವ್ಯವಸ್ಥಾಪಕರು, ಊರ-ಪರವೂರ ಭಕ್ತಾದಿಗಳು, ಜನಪ್ರತಿನಿಧಿಗಳು, ಸಂಘ – ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದರು.