ವಿಟ್ಲ: ವಿವಾಹಿತ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಕುರಿತು ಅವರ ಪತ್ನಿ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ನಿವಾಸಿ ಜೀವನ್ ಕುಮಾರ್ (40 ವ.) ನಾಪತ್ತೆಯಾದವರು.
ಜೀವನ್ ಕುಮಾರ್ ರವರು ಜ.17ರಂದು ಬೆಳಗ್ಗೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕುಳಾಲು ಮನೆಯಿಂದ ಮುಡಿಪು ಸಮೀಪದ ಕಂಬಳಪದವು ಭಾರೀ ವಾಹನ ತರಬೇತಿ ಕೇಂದ್ರಕ್ಕೆ ಕೆಲಸಕ್ಕೆಂದು ಹೋದವರು ವಾಪಾಸ್ಸು ಮನೆಗೆ ಬಾರದೇ ನಾಪತ್ತೆಯಾಗಿದ್ದರು.
ಈ ಬಗ್ಗೆ ವಿವಿಧೆಡೆ ಹುಟುಕಾಟ ನಡೆಸಿದರೂ ಅವರು ಪತ್ತೆಯಾಗದ ಹಿನ್ನೆಲೆಯಲ್ಲಿ ಅವರನ್ನು ಹುಡುಕಿ ಕೊಡುವಂತೆ ವಿಟ್ಲ ಪೊಲೀಸ್ ಠಾಣೆಗೆ ಅವರ ಪತ್ನಿ ರೂಪಶ್ರೀ ರವರು ದೂರು ನೀಡಿದ್ದಾರೆ. ಈ ಭಾವಚಿತ್ರದಲ್ಲಿ ಕಾಣುವ ವ್ಯಕ್ತಿಯನ್ನು ಯಾರಾದರೂ ಕಂಡಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ವಿಟ್ಲ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರ ಪ್ರಕಟಣೆ ತಿಳಿಸಿದೆ.