ವಿಟ್ಲ: ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಂಕಿ ತಗುಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟ ಘಟನೆ ನಡೆದಿದೆ.
ಅನಂತಾಡಿ ಗ್ರಾಮದ ಶಾಕೊಟ್ಟೆ ದಿ. ಹೊನ್ನಪ್ಪ ಗೌಡ ಅವರ ಪತ್ನಿ ಸುಶೀಲ(76 ವ.) ಮೃತಪಟ್ಟ ಮಹಿಳೆ.
ಕೆಲದಿನಗಳ ಹಿಂದೆ ಸುಶೀಲ ಅವರು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೆಂಕಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.