ಪುತ್ತೂರು: ಶ್ರೀ ಸತ್ಯಸಾಯಿ ಸೇವಾ ಸಮಿತಿ ಪುತ್ತೂರು ಮತ್ತು ಅಶ್ವಿನ್ ನೇತ್ರ ಚಿಕಿತ್ಸಾಲಯ ಪುತ್ತೂರು ಇವರ ಸಹಯೋಗದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ ಜ.26ರಂದು ಪೂರ್ವಾಹ್ನ 9 ಗಂಟೆಯಿಂದ 1 ಗಂಟೆಯವರೆಗೆ ಶ್ರೀ ಸತ್ಯಸಾಯಿ ಮಂದಿರದಲ್ಲಿ ನಡೆಯಲಿದೆ.
ಮೊದಲು ಬಂದ 200 ಮಂದಿಗೆ ಮಾತ್ರ ಅವಕಾಶವಿದ್ದು ಪೂರ್ವಾಹ್ನ 8.30 ರಿಂದ 11.30ರ ತನಕ ದಾಖಲಾತಿ ಮಾಡಿಕೊಳ್ಳಬಹುದು. ಲಭ್ಯ ಕನ್ನಡಕಗಳನ್ನು ಉಚಿತವಾಗಿ ನೀಡಲಾಗುವುದು. ಕಣ್ಣು ಪೊರೆ ಶಸ್ತ್ರ ಚಿಕಿತ್ಸೆ ಜಿಲ್ಲಾ ವೆನ್‌ಲಾಕ್ ಆಸ್ಪತ್ರೆಯಲ್ಲಿ ಮಾಡಲಾಗುವುದು. ದಿನಾಂಕವನ್ನು ಶಿಬಿರದಲ್ಲಿ ತಿಳಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕಾರ್ಯಕ್ರಮದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.