ಕಡಬ: ಪುಲ್ ಟ್ಯಾಂಕ್ ಡೀಸೆಲ್ ತುಂಬಿಸಿ ಹಣ ನೀಡದೆ ಪರಾರಿ!

0

ಕಡಬ: ಬೆಳ್ಳಂಬೆಳಗ್ಗೆ ಕಡಬದ ಪೆಟ್ರೊಲ್ ಪಂಪ್ ವೊಂದಕ್ಕೆ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಡೀಸೆಲ್ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಜ. 22 ರ ಮುಂಜಾನೆ ನಡೆದಿದೆ.

ಸುಬ್ರಹ್ಮಣ್ಯ ರಸ್ತೆಯ ಹಳೆಸ್ಟೇಷನ್ ಬಳಿಯ ಹಿಂದೂಸ್ಥಾನ್ ಪೆಟ್ರೋಲ್ ಪಂಪ್ ನಲ್ಲಿ ಮುಂಜಾನೆ 6 ರ ಸುಮಾರಿಗೆ ಈ ಘಟನೆ ನಡೆದಿದ್ದು, ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಥಾರ್ ಜೀಪ್ ನಲ್ಲಿ ಬಂದ ವ್ಯಕ್ತಿ ತನ್ನ ವಾಹನಕ್ಕೆ ಫುಲ್ ಟ್ಯಾಂಕ್ ಡಿಸೇಲ್ ತುಂಬಿಸಿದ್ದಾನೆ. ನಂತರ ಒಂದು ಕ್ಯಾನ್ ನೀಡಿ ಅದರಲ್ಲಿ ತುಂಬಿಸಲು ಸೂಚಿಸಿದಾಗ ಪೆಟ್ರೋಲ್ ಬಂಕ್ ಸಿಬ್ಬಂದಿ ತೆರಳಿದ್ದು, ಈ ಸಂದರ್ಭದಲ್ಲಿ ಏಕಾಏಕಿ ವಾಹನದಲ್ಲಿ ಪರಾರಿಯಾಗಿರುವುದು ಸಿಸಿ ಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಈ ವಾಹನದಲ್ಲಿರುವ ನಂಬರ್ ನಕಲಿ ಎನ್ನಲಾಗಿದೆ. ಪೆಟ್ರೋಲ್ ಬಂಕ್ ಸಿಬ್ಬಂದಿಗಳು ತಡವಾಗಿ ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ಮಾಹಿತಿ ಕಲೆಹಾಕುತ್ತಿರುವುದಾಗಿ ವರದಿಯಾಗಿದೆ.

LEAVE A REPLY

Please enter your comment!
Please enter your name here