ಬೆಳ್ತಂಗಡಿ: ಕರ್ನಾಟಕ ಯಕ್ಷಗಾನ ಅಕಾಡೆಮಿ 2024ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿನಿಧಿ ಪ್ರಶಸ್ತಿಗೆ ವಿದ್ವಾಂಸರನ್ನು ಹಾಗೂ ಕಲಾವಿದರನ್ನು ಆಯ್ಕೆ ಮಾಡಿದ್ದು ಅಕಾಡೆಮಿಯ ಗೌರವ ಪ್ರಶಸ್ತಿಗೆ ತೆಂಕುತಿಟ್ಟುನ ಹಿರಿಯ ಯಕ್ಷಗಾನ ಕಲಾವಿದ ಕೊಳ್ತಿಗೆ ನಾರಾಯಣ ಗೌಡ ಆಯ್ಕೆಯಾಗಿದ್ದಾರೆ.
ಮೂಲತಃ ಪುತ್ತೂರು ತಾಲೂಕಿನ ಕೊಳ್ತಿಗೆ ನಿವಾಸಿಯಾದ ಇವರು ಪ್ರಸ್ತುತ ಬೆಳ್ತಂಗಡಿಯ ಕಲ್ಮಂಜದಲ್ಲಿ ವಾಸವಿದ್ದಾರೆ. ಗೌರವ ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ.50 ಸಾವಿರ ನಗದು, ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು, ಪೇಟ ಹಾಗೂ ಫಲತಂಬೂಲಗಳನ್ನು ನೀಡಿ ಫೆ.16ರಂದು ಉಡುಪಿ ಯಕ್ಷಗಾನ ಕಲಾರಂಗದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.