ವಿಟ್ಲ: ಖಾಸಗಿ ಬಸ್ ಹಾಗೂ ಗೂಡ್ಸ್ ಆಪೆ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ಕಡಂಬು ತಿರುವಿನಲ್ಲಿ ನಡೆದಿದೆ.
ವಿಟ್ಲದ ಕಡೆಗೆ ತೆರಳುತ್ತಿದ್ದ ಗೂಡ್ಸ್ ಆಪೆ ರಿಕ್ಷಾ ಹಾಗೂ ಸಾಲೆತ್ತೂರು ಮುಡಿಪು ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸಿನ ನಡುವೆ ಈ ಅಪಘಾತ ಸಂಭವಿಸಿದೆ. ಗೂಡ್ಸ್ ಆಪೆ ರಿಕ್ಷಾಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಬಸ್ಸು ಚಾಲಕ ಮುಂದಾದಾಗ ಬಸ್ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ವೇಳೆ ಗೂಡ್ಸ್ ವಾಹನದ ಬಾಡಿ ಕಳಚಿಕೊಂಡು ರಸ್ತೆ ಬಿದ್ದಿದೆ. ಇಂಜಿನ್ ಜೊತೆಗೆ ಚಾಲಕ ಬೇರ್ಪಟ್ಟಿದ್ದರೂ ಸಣ್ಣಪುಟ್ಟ ಗಾಯಗಳಾಗಿ ಅವರು ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.