ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ” Software Engineering”ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರವನ್ನು ನಡೆಸಿದರು.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಬಂದ ವೈಷ್ಣವಿ ಕೆವಿ ಅಸಿಸ್ಟೆಂಟ್ ಪ್ರೊಫೆಸರ್ ವಿವೇಕಾನಂದ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಾತನಾಡುತ್ತಾ “ಸಾಫ್ಟ್ವೇರ್ ಅಭಿವೃದ್ಧಿ, ವಿವಿಧ ಮಾದರಿಗಳು, ವಿನ್ಯಾಸದಲ್ಲಿ ಬರುವಂತಹ ಸಮಸ್ಯೆಗಳು” ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವನ್ನು ಮೂಡಿಸುವ ನಿಟ್ಟಿನಲ್ಲಿ ಉತ್ತಮ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.