ಕಾಣಿಯೂರು: ಚಾರ್ವಾಕ ಶ್ರೀ ಕಪಿಲೇಶ್ವರ ದೇವರ ಜಾತ್ರೋತ್ಸವದ ಪ್ರಯುಕ್ತ ನಡೆದ ಗೆಜ್ಜೆಗಿರಿ ಮೇಳದವರ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಯಕ್ಷ ಬೊಳ್ಳಿ ಯಕ್ಷಗಾನ ಹಾಸ್ಯ ಕಲಾವಿದ ಕಡಬ ದಿನೇಶ್ ರೈಯವರನ್ನು ಸನ್ಮಾನಿಸಲಾಯಿತು.
ದೇವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೊರಗಪ್ಪ ಗೌಡ ಕುಕ್ಕುನಡ್ಕ,ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಧರ್ಮಪಾಲ ಗೌಡ ಕರಂದ್ಲಾಜೆ ಅವರು ದಿನೇಶ್ ರೈಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯ ದಿನೇಶ್ ಗೌಡ ಇಡ್ಯಡ್ಕ ಉಪಸ್ಥಿತರಿದ್ದರು.
ಯಕ್ಷಗಾನ ಸಂಯೋಜಕರಾದ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಪಟೇಲ್ ಚಾರ್ವಾಕ ಅಭಿನಂದನಾ ನುಡಿಗಳನ್ನಾಡಿದರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಜಯಂತ್ ವೈ ಅವರು ಸನ್ಮಾನ ಪತ್ರ ವಾಚಿಸಿದರು. ಶಿಕ್ಷಕ ಶಿವಪ್ರಸಾದ್ ಬಾರೆಂಗಳ ಕಾರ್ಯಕ್ರಮ ನಿರೂಪಿಸಿದರು.