ಜ.29: ನೆಲ್ಯಾಡಿಯಲ್ಲಿ ಗ್ಯಾರಂಟಿ ಯೋಜನೆಗಳ ನೋಂದಾವಣೆ, ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ

0

ನೆಲ್ಯಾಡಿ: ಕಡಬ ತಾಲೂಕಿಗೆ ಸಂಬಂಧಪಟ್ಟ ಕೌಕ್ರಾಡಿ, ನೆಲ್ಯಾಡಿ, ಗೋಳಿತ್ತೊಟ್ಟು ಗ್ರಾಮ ಪಂಚಾಯತ್‌ಗೆ ಒಳಪಟ್ಟ ಗ್ಯಾರಂಟಿ ಯೋಜನೆಗಳ ನೋಂದಾವಣೆಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರ ಜ.29ರಂದು ಬೆಳಿಗ್ಗೆ 10.30ರಿಂದ ಅಪರಾಹ್ನ 2 ಗಂಟೆ ತನಕ ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಲಿದೆ.


ಸಭೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಮಾಹಿತಿ ಕೇಂದ್ರ ತೆರೆದು ಅರ್ಜಿಗಳ ವಿಲೇವಾರಿ ಮಾಡಲಿದ್ದಾರೆ. ಫಲಾನುಭವಿಗಳು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಿಳಿಸಿದೆ.

LEAVE A REPLY

Please enter your comment!
Please enter your name here