ರಾಮಕುಂಜ: ಶ್ರೀರಾಮನ ಜನ್ಮಸ್ಥಳ ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠಾಪನೆಗೊಂಡು 1 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದಲ್ಲಿ ಜ.22ರಂದು ದೀಪೋತ್ಸವ ಹಾಗೂ ಶ್ರೀ ದೇವರಿಗೆ ರಂಗಪೂಜೆ ನಡೆಯಿತು.
ಗ್ರಾಮ ವಿಕಾಸ ಸಮಿತಿ ರಾಮಕುಂಜ, ಶ್ರೀ ರಾಮಕುಂಜೇಶ್ವರ ದೇವಸ್ಥಾನ ಹಾಗೂ ಊರವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.
ಮಕ್ಕಳಿಂದ ಭಜನೆ, ಕುಣಿತ ಭಜನೆ ನಡೆಯಿತು. ದೇವಾಲಯದ ಸುತ್ತ ದೀಪ ಹಚ್ಚಿ ಸಂಭ್ರಮಿಸಲಾಯಿತು. ರಂಗಪೂಜೆ, ಪ್ರಸಾದ ವಿತರಣೆ ಮಾಡಲಾಯಿತು. ರಾತ್ರಿ ಪ್ರಸಾದ ಭೋಜನ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಗ್ರಾಮ ವಿಕಾಸ ಸಮಿತಿ ಸದಸ್ಯರು, ಗ್ರಾಮಸ್ಥರು ಈ ದೀಪೋತ್ಸವ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.