ಪುತ್ತೂರು: 2023-24ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪುತ್ತೂರಿನ ನೃತ್ಯೋಪಾಸನಾ ಕಲಾ ಅಕಾಡೆಮಿಯ ವಿದ್ಯಾರ್ಥಿನಿ ನಿಖಿತಾ ಎ.ಎಂ.ರವರು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ಪಿಸಿಎಂಬಿ ವಿದ್ಯಾರ್ಥಿನಿಯಾಗಿರುವ ನಿಖಿತಾ ನೃತ್ಯೋಪಾಸನಾ ಕಲಾ ಅಕಾಡೆಮಿಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್‌ರವರ ಶಿಷ್ಯೆಯಾಗಿದ್ದು ಕೆಯ್ಯೂರು ಗ್ರಾಮದ ಎರಕ್ಕಳ ಮೋಹನ್ ಗೌಡ ಮತ್ತು ರೇಖಾರವರ ಪುತ್ರಿ.