ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಮತ್ತು ಇನ್ನರ್ವ್ಹೀಲ್ ಕ್ಲಬ್ ಪುತ್ತೂರು ಇದರ ಸಹಯೋಗದೊಂದಿಗೆ ಉಚಿತ ಮೂಳೆ ಖನಿಜ ಸಾಂಧ್ರತೆ(ಬಿಎಮ್ಡಿ) ಶಿಬಿರವು ಜ.23ರಂದು ನಡೆಯಿತು.
ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪುತ್ತೂರು ಸಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಭಾಸ್ಕರ್ ಎಸ್, ಇನ್ನರ್ ವ್ಹೀಲ್ ಕ್ಲಬ್ ಅಧ್ಯಕ್ಷೆ ರಾಜೇಶ್ವರಿ ಆಚಾರ್, ಸಂಧ್ಯಾ ಸಾಯ, ಸಂಧ್ಯಾ ಕಜೆ, ಸಂಧ್ಯಾ ಕೆ.ಎಸ್, ವಿಜಯಲಕ್ಷ್ಮೀ ಶೆಣೈ, ಶ್ರೀನಿಧಿ ರವಿ, ಮಂಜುಳಾ ಭಾಸ್ಕರ್ ಉಪಸ್ಥಿತರಿದ್ದರು. ಬೆಳಗ್ಗಿನಿಂದ ಮಧ್ಯಾಹ್ನದ ತನಕ ನಡೆದ ಶಿಬಿರದಲ್ಲಿ ನೂರಾರು ಮಂದಿ ಶಿಬಿರದ ಪ್ರಯೋಜನ ಪಡೆದರು.