ಕಜೆ ಬೇರಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಸಂಭ್ರಮ

0

ಬನ್ನೂರು: ಗ್ರಾಮ ಪಂಚಾಯತ್ ವ್ಯಾಪ್ತಿಯ ಕಜೆ ಬೇರಿಕೆ ಅಂಗನವಾಡಿ ಕೇಂದ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮ ಪಂಚಾಯತ್ ಹಾಗೂ ಸಮಸ್ತ ದಾನಿಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಮಕ್ಕಳ ಹಬ್ಬ ಬಾಲಮೇಳ ಸಂಭ್ರಮ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಉತ್ತಮ ತಳಹದಿ ದೊರೆಯುವುದು ಅಂಗನವಾಡಿ ಕೇಂದ್ರಗಳಿಂದ ಇಲ್ಲಿ ಮಕ್ಕಳ ಪಾಲನೆ ಪೋಷಣೆಯನ್ನು ಉತ್ತಮ ರೀತಿಯಲ್ಲಿ ಮಾಡುವ ಮೂಲಕ ಭವಿಷ್ಯದಲ್ಲಿ ಅವರನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪುಗೊಳಿಸುವ ಕಾರ್ಯ ಇಲ್ಲಿಂದಲೇ ಪ್ರಾರಂಭವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಪಂಚಾಯತ್ ಉಪಾಧ್ಯಕ್ಷ ಶೀನಪ್ಪ ಕುಲಾಲ್, ಪಂಚಾಯತ್ ಸದಸ್ಯರುಗಳಾದ ಶ್ರೀನಿವಾಸ ಪೆರ್ವೋಡಿ, ಗಣೇಶ್, ಭಜನಾ ಮಂದಿರದ ಅಧ್ಯಕ್ಷ ಅಣ್ಣು ಅಡೆಂಚಿಲಡ್ಕ, ಬೀರಿಗ ಅಂಗನವಾಡಿ ಕಾರ್ಯಕರ್ತೆ ಅರುಣಾ, ಕೋಡಿಂಬಾಡಿ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಬಾಲವಿಕಾಸ ಸಮಿತಿ ಅಧ್ಯಕ್ಷೆ ಜಯಶ್ರೀ ಶಿವಪ್ರಸಾದ್ ಉಪಸ್ಥಿತರಿದ್ದು ಪುಟಾಣಿಗಳ ಈ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಬಳಿಕ ಪುಟಾಣಿಗಳಿಂದ, ಪೋಷಕರಿಂದ ಹಾಗೂ ಸಂಘದ ಸದಸ್ಯರಿಂದ ಸಾಂಸ್ಕೃತಿಕ ವೈವಿಧ್ಯ ನಡೆಯಿತು. ವಿದ್ಯಾರ್ಥಿಗಳ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಕುರ್ಚಿಗಳನ್ನು ಹಸ್ತಾಂತರಿಸಿದರು.

ಹಳೆವಿದ್ಯಾರ್ಥಿಗಳು, ಶ್ರೀ ಕೃಷ್ಣ ಯುವಕ ಮಂಡಲ ಹಾಗೂ ಶ್ರೀ ದುರ್ಗಾ ಭಜನಾ ಮಂಡಳಿಯ ಸದಸ್ಯರು, ಮಕ್ಕಳ ಪೋಷಕರು, ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು, ಹಾಗೂ ಬಾಲವಿಕಾಸ ಸಮಿತಿ ಸದಸ್ಯರುಗಳಾದ ಮೆಲ್ವೀನ್ ಮಸ್ಕರೇನಸ್, ಸತೀಶ್ ಕುಲಾಲ್ ಹಾಗೂ ಅಂಗನವಾಡಿ ಸಹಾಯಕಿ ಮಾಲತಿ ಸಹಕರಿಸಿದರು. ಬೀರಿಗ ಅಂಗನವಾಡಿಯ ಬಾಲವಿಕಾಸ ಸಮಿತಿ ಅಧ್ಯಕ್ಷೆ ಸ್ವಾತಿ ಉಪಸ್ಥಿತರಿದ್ದರು.

ಭವ್ಯ ವಿಶ್ವನಾಥ್ ಸ್ವಾಗತಿಸಿದರು. ಗಿರೀಶ್ ಕುಲಾಲ್ ಹಾಗೂ ರಮೇಶ್ ಅಡೆಂಚಿಲಡ್ಕ ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ಶಿವಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರೇಖಾ ದಾಮೋದರ್ ವರದಿ ವಾಚಿಸಿದರು. ಬಹುಮಾನ ವಿಜೇತರ ಪಟ್ಟಿಯನ್ನು ಮಮತಾ ಲೋಕೇಶ್ ಓದಿದರು. ಈ ದಿನ ವಿದ್ಯಾರ್ಥಿಗಳ ಪೋಷಕರು ಅಂಗನವಾಡಿಗೆ ಕುರ್ಚಿಗಳನ್ನು ಹಸ್ತಾಂತರಿಸಿದರು.

LEAVE A REPLY

Please enter your comment!
Please enter your name here