ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.23 ರಿಂದ 25ರ ತನಕ ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದ್ದು, ಗುರುವಾರದಂದು ವಾರ್ಷಿಕ ನೇಮೋತ್ಸವಕ್ಕೆ ಚಾಲನೆ ನೀಡಲಾಯಿತು.
ಗ್ರಾಮದೇವರ ಅರ್ಚಕರ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಜ.23 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಭಜನಾ ಕಾರ್ಯಕ್ರಮ, ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಇತ್ಯಾದಿ ಧಾರ್ಮಿಕ ವಿಧಿವಿಧಾನಗಳು ಜರಗಿದ್ದು, ಕಲಿಯುಗದಲ್ಲಿ ಶ್ರೀ ಕೊರಗಜ್ಜನ ಸನ್ನಿಧಾನದಲ್ಲಿ ಅಪಾರ ಶಕ್ತಿಯಿದೆ. ಶ್ರೀ ಕೊರಗಜ್ಜನ ಆಶೀವಾದದಿಂದ ಶ್ರೀ ಕ್ಷೇತ್ರ ಸಮೃದ್ಧಿಯತ್ತ ಸಾಗಲಿ, ಊರಿಗೆ ಸುಭೀಕ್ಷೆ ನೀಡಲಿ, ನೇಮೋತ್ಸವ ನಿರ್ವೀಘ್ನವಾಗಿ ನೆರವೇರಲಿ ಎಂದು ಹೇಳಿ ಪ್ರಾರ್ಥಿಸಿದರು. ಶ್ರೀ ಕ್ಷೇತ್ರದ ದೈವದ ಪ್ರಧಾನ ಅರ್ಚಕ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ಮಧ್ಯಸ್ಥರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ಅಧ್ಯಕ್ಷ ವಿಶ್ವನಾಥ ಮಣ್ಣಾಪು, ಕಾರ್ಯದರ್ಶಿ ದಿನೇಶ್ ಕೆಮ್ಮಿಂಜೆ ಸಹಿತ ಹಲವರು ಭಕ್ತಾಧಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.
ಭಾಗವಹಿಸುವ ಭಜನಾ ಮಂಡಳಿಗಳು:
ನೇಮೋತ್ಸವ ಕಾರ್ಯಕ್ರಮದಲ್ಲಿ ಮೊಟ್ಟೆತ್ತಡ್ಕ ಮಣ್ಣಾಪು ಶ್ರೀ ಸ್ವಾಮಿ ಕೊರಗಜ್ಜ ಭಜನಾ ಮಂಡಳಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ, ಪಾಲಿಂಜೆ ಶ್ರೀ ಮಹಾವಿಷ್ಣು ಮಹಿಳಾ ಭಜನಾ ಮಂಡಳಿ, ಮೊಟ್ಟೆತ್ತಡ್ಕ ಮಿಷನ್‌ಮೂಲೆ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ, ಮರಾಠಿ ಯುವ ವೇದಿಕೆ ಭಜನಾ ತಂಡ, ಶ್ರೀ ವಜ್ರಮಾತಾ ಮಹಿಳಾ ಭಜನಾ ಮಂಡಳಿ, ಮೊಗರು ಶ್ರೀ ಮಹಾವಿಷ್ಣು ಭಜನಾ ಮಂಡಳಿ, ದೇವಸ್ಯ ಶ್ರೀಹರಿ ಭಜನಾ ಮಂಡಳಿ, ಉಜಿರೆ ಗುರುಪಳ್ಳ ಶ್ರೀ ಗುರುರಾಘವೇಂದ್ರ ಮಹಿಳಾ ಭಜನಾ ಮಂಡಳಿ, ಕಡಬ ಭಜನಾಮೃತ ಭಜನಾ ತಂಡ, ಬಳ್ಪ ಧರ್ಮಶಾಸ್ತಾವು ಕುಣಿತ ಭಜನಾ ತಂಡದ ಸದಸ್ಯರಿಂದ ಭಜನೆ ಕಾರ್ಯಕ್ರಮ ಜರಗಲಿದೆ. ಹೆಚ್ಚಿನ ಮಾಹಿತಿಗೆ ಗಣೇಶ್ ಪೂಜಾರಿ(7349237945), ವಿಶ್ವನಾಥ ಮಣ್ಣಾಪು(7760580714), ದಿನೇಶ್ ಕೆಮ್ಮಿಂಜೆ(7676806506) ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.
ಜ.24/ಜ.25 ಶ್ರೀ ಕ್ಷೇತ್ರದಲ್ಲಿ..
ಜ.24 ರಂದು ಬೆಳಿಗ್ಗೆ ಸಾಮೂಹಿಕ ಪ್ರಾರ್ಥನೆ, ಮಧ್ಯಾಹ್ನ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಕಾಲಾವಧಿ ತಂಬಿಲ, ಅನ್ನಸಂತರ್ಪಣೆ ನಡೆಯಲಿದೆ. ಜ.25 ರಂದು ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತಮಾನದವರೆಗೆ ಅರ್ಧ ಏಕಾಹ ಭಜನೆ, ರಾತ್ರಿ ಕೊರಗಜ್ಜ ದೈವದ ಭಂಡಾರ ತೆಗೆಯುವುದು ಹಾಗೂ ಶ್ರೀ ಕೊರಗಜ್ಜ ದೈವಕ್ಕೆ ಎಣ್ಣೆ ಕೊಡುವುದು, ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ಜರಗಲಿದೆ.