ಪುತ್ತೂರು: ಕರ್ನಾಟಕ ರಾಜ್ಯ ಡಾ.ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸಾತ್ವಿ ಕೆ.ವಿ.ಯವರು ಶೇ.84.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.
ಸಾತ್ವಿ ಪುತ್ತೂರಿನ ವಿಶ್ವಕಲಾನಿಕೇತನ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್ ಆ್ಯಂಡ್ ಕಲ್ಚರ್ ನೃತ್ಯ ಶಾಲೆಯ ಗುರುಗಳಾದ ಕರ್ನಾಟಕ ಕಲಾಶ್ರೀ ವಿದುಷಿ ನಯನ.ವಿ.ರೈ ಮತ್ತು ವಿದುಷಿ ಸ್ವಸ್ತಿಕ.ಆರ್.ಶೆಟ್ಟಿ ಯವರ ಶಿಷ್ಯೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಇವರು ಕೊಡಿಪ್ಪಾಡಿ ವಾಸುದೇವ ಹಾಗೂ ಮಂಜುಳ ದಂಪತಿ ಪುತ್ರಿ.