ಪುತ್ತೂರು: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಜ್ಞಾನ ರೈ ಡಿಸ್ಟಿಂಕ್ಷನ್ ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಪುತ್ತೂರಿನ ವೈಷ್ಣವಿ ನಾಟ್ಯಾಲಯದ ಯೋಗೀಶ್ವರಿ ಜಯಪ್ರಕಾಶ್ ಇವರ ಶಿಷ್ಯೆಯಾಗಿರುವ ಇವರು ಕುರಿಯ ಗ್ರಾಮದ ಜಯರಾಮ್ ರೈ ಹಾಗೂ ಸುದ್ದಿ ನ್ಯೂಸ್ ಚಾನೆಲ್ ನಿರೂಪಕಿ ಹೇಮಾ ಜಯಾರಾಮ್ ದಂಪತಿಯ ಪುತ್ರಿ. ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯ ವಿದ್ಯಾರ್ಥಿನಿಯಾಗಿರುವ ಜ್ಞಾನ ರೈ ಅವರು ಬಹುಮುಖ ಪ್ರತಿಭೆಯಾಗಿದ್ದು ಕನ್ನಡ ರಾಜ್ಯೋತ್ಸವ ಪ್ರಯುಕ್ತ ಈ ವರ್ಷ ನೀಡಲಾದ ದ.ಕ. ಜಿಲ್ಲಾ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.