ಪುತ್ತೂರು: ಕರ್ನಾಟಕ ರಾಜ್ಯ ಸರಕಾರದಿಂದ ನೀಡುವ 2019 ನೇ ಸಾಲಿನ ಪ್ರತಿಷ್ಠಿತ ಚಲನ ಚಿತ್ರ ರಾಜ್ಯ ಪ್ರಶಸ್ತಿ ಪುರಸ್ಕೃತರ ಹೆಸರು ಘೋಷಣೆಯಾಗಿದ್ದು ಕರಾವಳಿಯ ಖ್ಯಾತ ಚಿತ್ರ ಸಾಹಿತಿ ರಝಾಕ್ ಪುತ್ತೂರು ಇವರು ಅತ್ಯುತ್ತಮ ಗೀತೆ ರಚನೆಕಾರ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಅನೇಕ ಕನ್ನಡ ಹಾಗು ತುಳು ಚಿತ್ರಗಳಿಗೆ ಸಂಭಾಷಣೆ ಮತ್ತು ಹಾಡುಗಳನ್ನು ಬರೆದಿರುವ ಇವರ ನಿರ್ದೇಶನದಲ್ಲಿ ಮೂಡಿ ಬಂದ ಪೆನ್ಸಿಲ್ ಬಾಕ್ಸ್ ಎಂಬ ಕನ್ನಡ ಚಿತ್ರ ಜಿಲ್ಲೆಯಾದ್ಯಂತ ಯಶಸ್ಸು ಕಂಡಿದ್ದು ಪುತ್ತೂರಿನ ಅರುಣಾ ಚಿತ್ರ ಮಂದಿರದಲ್ಲಿ 75 ದಿನಗಳ ಭರ್ಜರಿ ಪ್ರದರ್ಶನ ಕಂಡಿತ್ತು.
ದಯಾನಂದ್ ಎಸ್ ರೈ ನಿರ್ಮಾಣದಲ್ಲಿ ತಯಾರಾದ ಈ ಚಿತ್ರದಲ್ಲಿ ದೀಕ್ಷಾ ಡಿ ರೈ ನಾಯಕಿಯಾಗಿ ಅಭಿನಯಿಸಿದ್ದರು. ಇದೇ ಚಿತ್ರದ ಹಾಡಿನ ಸಾಹಿತ್ಯಕ್ಕಾಗಿ ರಾಜ್ಯ ಚಲನ ಚಿತ್ರ ಪ್ರಶಸ್ತಿ ಗೆ ಆಯ್ಕೆ ಯಾಗಿದ್ದಾರೆ.
ಇದೀಗ ರಝಾಕ್ ಪುತ್ತೂರು ಇವರು ಸ್ಕೂಲ್ ಲೀಡರ್ ಎಂಬ ಚಿತ್ರವನ್ನು ಕಥ ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದು ಏಪ್ರಿಲ್ ತಿಂಗಳಲ್ಲಿ ತೆರೆ ಕಾಣಲಿದೆ.