ಪುತ್ತೂರು: ಕೊಳ್ತಿಗೆ ಗ್ರಾಮದ ಬಾಯಂಬಾಡಿ ಶ್ರೀಷಣ್ಮುಖ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವದ ಅಂಗವಾಗಿ ಜ.22 ಹಾಗೂ 23ರಂದು ಕ್ಷೇತ್ರದ ದೈವಗಳ ನೇಮೋತ್ಸವ ನಡೆಯಿತು.
ಜಾತ್ರೋತ್ಸವದಲ್ಲಿ ಜ.22ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ರಥದಲ್ಲಿ ಶ್ರೀದೇವರ ಉತ್ಸವ, ದರ್ಶನ ಬಲಿ ಉತ್ಸವ, ಬಟ್ಟಲು ಕಾಣಿಕೆ ನಡೆದು ರಾತ್ರಿ ರಂಗಪೂಜೆ ನಡೆದ ಬಳಿಕ ಕ್ಷೇತ್ರ ದೈವಗಳಾದ ವ್ಯಾಘ್ರ ಚಾಮುಂಡಿ, ವಾರಾಹಿ ದೈವದ ನೇಮ, ಕಾಣಿಕೆ ಹರಕೆ ಸಮರ್ಪಣೆ, ಜ.23ರಂದು ರಕ್ತೇಶ್ವರಿ, ಧೂಮ್ರ-ಧೂಮಾವತಿ ಮತ್ತು ಶಿರಾಡಿ ದೈವಗಳ ನೇಮ ನಡಾವಳಿ ಹಾಗೂ ಪ್ರಸಾದ ವಿತರಣೆಯೊಂದಿಗೆ ಜಾತ್ರೋತ್ಸವವು ಸಂಪನ್ನಗೊಂಡಿತು.
ದೇವಸ್ಥಾನದ ಉತ್ಸವ ಸಮಿತಿ ಅಧ್ಯಕ್ಷ ವಸಂತ ಕುಮಾರ್ ರೈ ದುಗ್ಗಳ, ಪ್ರಧಾನ ಕಾರ್ಯದರ್ಶಿ ಕೆ.ಎಂ ಸುಬ್ರಹ್ಮಣ್ಯ ಕಟ್ಟಪುಣಿ, ಗೌರವಾಧ್ಯಕ್ಷ ಕೆ.ಆರ್ ಲಕ್ಷ್ಮಣ ಗೌಡ ಕುಂಟಿಕಾನ, ಆಡಳಿತಾಧಿಕಾರಿ ಮಂಜುನಾಥ ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಜಾತ್ರೋತ್ಸವದಲ್ಲಿ ಭಾಗವಹಿಸಿದ್ದರು.