ಪುತ್ತೂರು;ಇರ್ದೆ ಗ್ರಾಮದ ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಫೆ.1ರಿಂದ 6ರ ತನಕ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವಕ್ಕೆ ಜ.24ರಂದು ಗೊನೆ ಮುಹೂರ್ತ ನೆರವೇರಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ಬಳಿಯ ತೋಟದಲ್ಲಿ ಗೊನೆ ಕಡಿಯಲಾಯಿತು. ಅರ್ಚಕ ಅನಂತರಾಮ ಮಡಕುಲ್ಲಾಯ ಗೊನೆ ಮುಹೂರ್ತ ನೆರವೇರಿಸಿದರು. ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಭಟ್ ಘಾಟೆ, ಸದಸ್ಯ ಗಣೇಶ್ ಭಟ್ ಸುದನಡ್ಕ, ಬೆಟ್ಟಂಪಾಡಿ ಗ್ರಾ.ಪಂ ಸದಸ್ಯ ಪ್ರಕಾಶ್ ರೈ ಬೈಲಾಡಿ, ರಾಜರಾಮ ಭಟ್, ಆನಂದ ಗೌಡ ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಉಪಸ್ಥಿತರಿದ್ದರು.