ಮೊಟ್ಟೆತ್ತಡ್ಕ ಮಣ್ಣಾಪು ಕೊರಗಜ್ಜ ಕ್ಷೇತ್ರದಲ್ಲಿ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆ, ದೈವದ ಕಾಲಾವಧಿ ತಂಬಿಲ,ಅನ್ನಸಂತರ್ಪಣೆ

0

ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.23 ರಿಂದ 25ರ ತನಕ ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ ಎನ್.ರವೀಂದ್ರ ಶೆಟ್ಟಿ ನುಳಿಯಾಲುರವರ ನೇತೃತ್ವದಲ್ಲಿ ವಿಜ್ರಂಭಣೆಯಿಂದ ನಡೆಯಲಿದ್ದು, ಈಗಾಗಲೇ ಶ್ರೀ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಚಾಲನೆ ನೀಡಲಾಗಿದೆ.


ಗ್ರಾಮದೇವರ ಅರ್ಚಕರ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ಜ.24 ರಂದು ಸಾಮೂಹಿಕ ಪ್ರಾರ್ಥನೆ, ಮಧ್ಯಾಹ್ನ ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವದ ಕಾಲಾವಧಿ ತಂಬಿಲ ಬಳಿಕ ಅನ್ನಸಂತರ್ಪಣೆ ನಡೆಯಿತು. ಶ್ರೀ ಕ್ಷೇತ್ರದ ದೈವದ ಪ್ರಧಾನ ಅರ್ಚಕ ಕುಂಡ ಮಣ್ಣಾಪು, ಅಣ್ಣು ಮಣ್ಣಾಪು, ಮಧ್ಯಸ್ಥರಾದ ಗಣೇಶ್ ಪೂಜಾರಿ ಕೆಮ್ಮಿಂಜೆ, ಅಧ್ಯಕ್ಷ ವಿಶ್ವನಾಥ ಮಣ್ಣಾಪು, ಉಪಾಧ್ಯಕ್ಷ ವಿಶ್ವನಾಥ ಪೂಜಾರಿ ಮೊಟ್ಟೆತ್ತಡ್ಕ ಕಾರ್ಯದರ್ಶಿ ದಿನೇಶ್ ಕೆಮ್ಮಿಂಜೆ ಹಾಗೂ ಪದಾಧಿಕಾರಿಗಳ ಸಹಿತ ಹಲವರು ಭಕ್ತಾಧಿಗಳು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.


ಲೈಟಿಂಗ್ಸ್‌ಗಳಿಂದ ಕಂಗೊಳಿಸುತ್ತಿದೆ ಶ್ರೀ ಕ್ಷೇತ್ರ:
ವಾರ್ಷಿಕ ನೇಮೋತ್ಸವದ ಪ್ರಯಕ್ತ ಶ್ರೀ ಕ್ಷೇತ್ರವು ಬಣ್ಣ ಬಣ್ಣದ ಲೈಟಿಂಗ್ಸ್‌ಗಳಿಂದ ಕಂಗೊಳಿಸುತ್ತಿದ್ದು ಭಕ್ತರ ಕಣ್ಣಿಗೆ ಹಬ್ಬವನ್ನುಂಟು ಮಾಡುತ್ತಿದೆ. ಜೊತೆಗೆ ಮಣ್ಣಾಪು ಕ್ಷೇತ್ರದ ದಾರಿಯುದ್ದಕ್ಕೂ ಕೇಸರಿ ತಳಿರು ತೋರಣಗಳನ್ನು ಜೋಡಿಸಲಾಗಿದೆ. ಮೊಟ್ಟೆತ್ತಡ್ಕ ಜಂಕ್ಷನ್ ಬಳಿಯ ಮಣ್ಣಾಪು ಶ್ರೀ ಕ್ಷೇತ್ರಕ್ಕೆ ಎಂಟ್ರಿ ಕೊಡುವ ದಾರಿಯಲ್ಲಿ ಬೃಹತ್ ದ್ವಾರವನ್ನು ಅಳವಡಿಸಲಾಗಿದೆ.
ಹರಕೆಯನ್ನು ಒಪ್ಪಿಸುವವರು ಅದೇ ದಿನ ಸಮಿತಿಯವರಲ್ಲಿ ತಿಳಿಸತಕ್ಕದ್ದು. ಪ್ರತೀ ಸಂಕ್ರಮಣದಂದು ಅಗೇಲು ಸೇವೆ ನಡೆಯಲಿರುವುದು. ಅಕ್ಕಿ, ಹೂ, ಹಿಂಗಾರ, ಬೀಡ, ಚಕ್ಕುಲಿ, ಶೇಂದಿ ಇತ್ಯಾದಿಗಳನ್ನು ಕೃತಜ್ಞತಾಪೂರ್ವಕವಾಗಿ ಸ್ವೀಕರಿಸಲಾಗುತ್ತದೆ. ಭಕ್ತಾಧಿಗಳಿಂದ ಅನ್ನದಾನಕ್ಕೆ ಬೇಕಾದ ಅಕ್ಕಿ, ತೆಂಗಿನಕಾಯಿ, ದವಸಧಾನ್ಯಗಳು, ತರಕಾರಿಗಳು, ಬಾಳೆಎಲೆ ಮೊದಲಾದುವುಗಳನ್ನು ಕೃತಜ್ಞತಾಪೂರ್ವಕವಾಗಿ ಶ್ರೀ ಕ್ಷೇತ್ರದಲ್ಲಿ ಸ್ವೀಕರಿಸಲಾಗುತ್ತದೆ. ಹರಕೆಯನ್ನು ಸಲ್ಲಿಸಲು ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ಬೇಡಿಕೆಗಳನ್ನು ಶ್ರೀ ಕ್ಷೇತ್ರದಲ್ಲಿ ಕೇಳಲಾಗುವುದಿಲ್ಲ. ಭಕ್ತರ ಇಚ್ಚೆಯನುಸಾರ ಕಾಣಿಕೆಯನ್ನು ನೀಡಿದ್ದಲ್ಲಿ ಮಾತ್ರ ಸ್ವೀಕರಿಸಲಾಗುವುದು. ಹೆಚ್ಚಿನ ಮಾಹಿತಿಗೆ ಗಣೇಶ್ ಪೂಜಾರಿ(7349237945), ವಿಶ್ವನಾಥ ಮಣ್ಣಾಪು(7760580714), ದಿನೇಶ್ ಕೆಮ್ಮಿಂಜೆ(7676806506) ನಂಬರಿಗೆ ಸಂಪರ್ಕಿಸಬಹುದಾಗಿದೆ ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

5 ಸಾವಿರ ಭಕ್ತರ ಆಗಮನ ನಿರೀಕ್ಷೆ…
ಶ್ರೀ ಕ್ಷೇತ್ರದಲ್ಲಿ ವರ್ಷಂಪ್ರತಿ ನಡೆಯುವ ನೇಮೋತ್ಸವವು ಭಕ್ತರ ಆಶೀರ್ವಾದದಿಂದ ಯಶಸ್ವಿಯಾಗಿ ನಡೆದಿದ್ದು ಸರ್ವತ್ರ ಶ್ಲಾಘನೆಗೆ ಪ್ರಾಪ್ತವಾಗಿದೆ. ನೇಮೋತ್ಸವದ ತನಕ ನಡೆದ ಪ್ರತಿಯೊಂದು ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ಹಾಗೂ ಶಿಸ್ತುಬದ್ಧವಾಗಿ ನಡೆದಿರುವ ಹಿಂದೆ ಇಲ್ಲಿನ ಸ್ಥಳೀಯರು ನಿರ್ವಹಿಸಿದ ಕಾರ್ಯವೈಖರಿಯೇ ಕಾರಣವಾಗಿದೆ. ಪ್ರತಿಯೋರ್ವರು ತಮಗೆ ವಹಿಸಿದ ಕಾರ್ಯವನ್ನು ನಿಸ್ಸಂದೇಹವಾಗಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಎಂದು ಹೇಳಲು ಹೆಮ್ಮೆಯಾಗುತ್ತದೆ. ಇಲ್ಲಿನ ಮಣ್ಣಾಪು ಕೊರಗಜ್ಜ ಕ್ಷೇತ್ರವು ಜಾತ್ಯಾತೀತವಾಗಿ ಅಭಿವೃದ್ಧಿ ಪಥದಲ್ಲಿ ಸಾಗಲು ಶ್ರೀ ಕೊರಗಜ್ಜರವರೇ ಪ್ರೇರೇಪಣಾ ಶಕ್ತಿಯಾಗಿ ಆಶೀರ್ವದಿಸುತ್ತಿದ್ದಾರೆ. ಈ ಬಾರಿಯ ನೇಮೋತ್ಸವದಲ್ಲಿ ಐದು ಸಾವಿರಕ್ಕೂ ಮಿಕ್ಕಿ ಭಕ್ತರು ಆಗಮಿಸುವ ನಿರೀಕ್ಷೆಯನ್ನು ಹೊಂದಲಾಗಿದೆ.
-ಎನ್.ರವೀಂದ್ರ ಶೆಟ್ಟಿ ನುಳಿಯಾಲು, ಗೌರವಾಧ್ಯಕ್ಷರು, ಶ್ರೀ ಮಣ್ಣಾಪು ಕೊರಗಜ್ಜ ಕ್ಷೇತ್ರ

ಜ.25 ವೈಭವದ ನೇಮೋತ್ಸವ..
ಜ.25 ರಂದು ಸೂರ್ಯೋದಯದಿಂದ ಸಂಜೆ ಸೂರ್ಯಾಸ್ತಮಾನದವರೆಗೆ ಅರ್ಧ ಏಕಾಹ ಭಜನೆ, ರಾತ್ರಿ ಕೊರಗಜ್ಜ ದೈವದ ಭಂಡಾರ ತೆಗೆಯುವುದು ಹಾಗೂ ಶ್ರೀ ಕೊರಗಜ್ಜ ದೈವಕ್ಕೆ ಎಣ್ಣೆ ಕೊಡುವುದು, ಶ್ರೀ ಕೊರಗಜ್ಜ ದೈವದ ನೇಮೋತ್ಸವ ನಡೆಯಲಿದೆ. ಬಳಿಕ ಅನ್ನಸಂತರ್ಪಣೆ ಜರಗಲಿದೆ.

LEAVE A REPLY

Please enter your comment!
Please enter your name here