ಕಾಂಗ್ರೆಸ್ ಮುಖಂಡ ಹರಿಪ್ರಸಾದ್ ರೈ ಮಠಂತಬೆಟ್ಟು ರವರ ಉಡುಪಿಯ ನಿವಾಸಕ್ಕೆ ಗೃಹಸಚಿವ ಡಾ. ಪರಮೇಶ್ವರ್ ಭೇಟಿ

0

ಪುತ್ತೂರು: ಪುತ್ತೂರು ಸೇರಿದಂತೆ ವಿವಿಧೆಡೆ ಹೆಚ್.ಪಿ.ಆರ್. ಇನ್ಸ್ಟಿಟ್ಯೂಷನ್ ನಡೆಸುತ್ತಿರುವ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರೂ, ಕಾಂಗ್ರೆಸ್ ಮುಖಂಡರೂ ಆಗಿರುವ ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ನಿವಾಸಿ ಹರಿಪ್ರಸಾದ್ ರೈ ಅವರ ಉಡುಪಿಯ ಮನೆಗೆ ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸೌಹಾರ್ದ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಯಿತು. ಮಾಜಿ ಸಚಿವರುಗಳಾದ ವಿನಯ್ ಕುಮಾರ್ ಸೊರಕೆ, ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು. ಹರಿಪ್ರಸಾದ್ ರೈಯವರ ಪತ್ನಿ ವಿಜೇತ ರೈ ಅತಿಥಿಗಳನ್ನು ಸತ್ಕರಿಸಿದರು.

LEAVE A REPLY

Please enter your comment!
Please enter your name here