ಪುತ್ತೂರು: ರಾಷ್ಟ್ರ ರಕ್ಷಣೆಗೆ ಸೌಹಾರ್ದತೆಯ ಸಂಕಲ್ಪ ಎಂಬ ಧ್ಯೇಯ ವಾಕ್ಯದೊಂದಿಗೆ ಎಸ್.ಕೆ.ಎಸ್.ಎಸ್.ಎಫ್ ನಡೆಸುತ್ತಿರುವ ಮಾನವ ಸರಪಳಿ ಕಾರ್ಯಕ್ರಮ ಜ.26ರಂದು ಕುಂಬ್ರದಲ್ಲಿ ನಡೆಯಲಿದೆ.
ಸಮಾರಂಭದಲ್ಲಿ ದ. ಕ. ಜಿಲ್ಲಾಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸಮಸ್ತ ಕೇಂದ್ರ ಮುಶಾವರ ಸದಸ್ಯರಾದ ಬಂಬ್ರಾಣ ಉಸ್ತಾದ್, ಎಸ್ಕೆಎಸ್ಸೆಸ್ಸೆಫ್ ರಾಜ್ಯ ಪ್ರ.ಕಾರ್ಯದರ್ಶಿ ಮೌಲಾನಾ ಅನೀಸ್ ಕೌಸರಿ, ವಂದನೀಯ ರೇ|ಫಾದರ್ ಅಂಟನಿ ಪ್ರಕಾಶ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಖ್ಯಾತ ಚಿಂತಕರೂ, ವಾಗ್ಮಿಯೂ ಆದ ನಿಕೇತ್ ರಾಜ್ ಮೌರ್ಯ ಸಹಿತ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಪ್ರಮುಖರು ಬಾಗವಹಿಸಲಿದ್ದಾರೆ.
ಮಧ್ಯಾಹ್ನ ಗಂ. 2ಕ್ಕೆ ಆಕರ್ಷಣೀಯ ದಫ್, ಸ್ಕೌಟ್ ಗೈಡ್ ಒಳಗೊಂಡ ಕಾಲ್ನಡಿಗೆಯು ಪರ್ಪಂಜದ ಅಬ್ರೋಡ್ ಹಾಲ್ ಬಳಿಯಿಂದ ಕುಂಬ್ರ ತನಕ ಸಾಗಿ ಬರಲಿದ್ದು ಬಳಿಕ ಸಂಜೆ ಗಂಟೆ 3.30ಕ್ಕೆ ಕುಂಬ್ರ ಜಂಕ್ಷನ್ ಬಳಿಯ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ವ್ಯವಸ್ಥಿತವಾಗಿ ಮತ್ತು ಶಿಸ್ತುಬದ್ದವಾಗಿ ನಡೆಯಲು ಈಗಾಗಲೇ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಜಾತಿ, ಧರ್ಮದವರು ಸಹಕರಿಸಿ ಯಶಸ್ವಿಗೊಳಿಸಬೇಕೆಂದು ಮಾನವ ಸರಪಳಿ ಸ್ವಾಗತ ಸಮಿತಿ ಅಧ್ಯಕ್ಷ ಮಹಮ್ಮದ್ ಕೆ.ಎಚ್ ತಿಳಿಸಿದ್ದಾರೆ.