ಉಪ್ಪಿನಂಗಡಿ: ಇಲ್ಲಿನ ಇಂದ್ರಪ್ರಸ್ಥ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಜನವರಿ 26 ರಂದು 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಸಂಸ್ಥೆಯ ಸಂಚಾಲಕರಾದ ಸುಬ್ರಹ್ಮಣ್ಯ ಭಟ್ ಕೆದಿಲ ಇವರು ಧ್ವಜಾರೋಹಣವನ್ನು ಮಾಡಿ ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಗಣರಾಜ್ಯೋತ್ಸವದ ಕುರಿತು ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವಿದ್ಯಾರ್ಥಿನಿ ಪೂರ್ವಿ ಬಿ.ಜಿ. 8ನೇ ತರಗತಿ ದಿನದ ಮಹತ್ವದ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಹೆಚ್.ಕೆ.ಪ್ರಕಾಶ್, ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯಶಿಕ್ಷಕಿ ವೀಣಾ ಆರ್ ಪ್ರಸಾದ್ ಹಾಗೂ ಸಂಸ್ಥೆಯ ಬೋಧಕ- ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಸಿಹಿ ಹಂಚುವ ಮೂಲಕ ಕಾರ್ಯಕ್ರಮವನ್ನು ಸಂಪನ್ನಗೊಳಿಸಲಾಯಿತು.