ಕಾಣಿಯೂರು : ಸ. ಕಿ. ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ದ್ವಜಾರೋಹಣ ನೆರವೇರಿಸಿದ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಸೀತಾರಾಮ ಕೊಪ್ಪ ಮಾತನಾಡಿ, ನಮ್ಮ ದೇಶದಲ್ಲಿ ಹಲವು ಜಾತಿ ಧರ್ಮ ಇದ್ದರೂ ನಾವೆಲ್ಲರೂ ಒಂದೇ ಎಂಬ ಭಾವನೆಯಿಂದ ದೇಶಕ್ಕಾಗಿ ಶ್ರಮಿಸಬೇಕು ಹಾಗೂ ದೇಶದ ಸಮಗ್ರತೆಯನ್ನು ಎತ್ತಿ ಹಿಡಿಯಬೇಕು ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರಕಿ ವೀಣಾ, ಸೇವಾಪ್ರತಿನಿಧಿ ಸುಜಿತ್, ಹಾಗೂ ಪೋಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮುಖ್ಯಗುರು ನಾರಾಯಣ. ಡಿ ಸ್ವಾಗತಿಸಿ, ಅತಿಥಿ ಶಿಕ್ಷಕ ಸುರೇಶ ನಾಯ್ಕ ವಂದಿಸಿದರು.