ಪುತ್ತೂರು ಸ.ಮಾ.ಹಿ.ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ

0

ಪುತ್ತೂರು: ನೆಲ್ಲಿಕಟ್ಟೆಯಲ್ಲಿರುವ ಸ.ಮಾ.ಹಿ.ಪ್ರಾಥಮಿಕ ಶಾಲೆ ಪುತ್ತೂರು ಇಲ್ಲಿ 76 ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ನಗರಸಭಾ ಸದಸ್ಯ ರಮೇಶ ರೈ ನೆಲ್ಲಿಕಟ್ಟೆ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಕುರಿತು ಮಾತನಾಡಿದರು.

ಅಸಹಾಯಕರ ಸೇವಾ ಟ್ರಸ್ಟ್ ಅಧ್ಯಕ್ಷೆ ನಯನಾ ರೈ, ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಅಧ್ಯಕ್ಷೆ ವೇದಾವತಿ ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷೆ ಶೈಲಜ ಸುದೇಶ್ ಗಣರಾಜ್ಯೋತ್ಸವದ ಆಚರಣೆ ಮತ್ತು ದೇಶಾಭಿಮಾನದ ಬಗ್ಗೆ ,ಮಕ್ಕಳ ಭವಿಷ್ಯದ ಕುರಿತು ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಯಶೋಧ ಸ್ವಾಗತಿಸಿದರು ಹಾಗೂ ಸಹಶಿಕ್ಷಕಿ ವಂದಿಸಿದರು. ಶಾಲೆಯ ಎಸ್.ಡಿ.ಎಂ.ಸಿ ಸದಸ್ಯರು ಕರ್ನಾಟಕ ಪತ್ರಕರ್ತರ ಸಂಘದ ಸದಸ್ಯರಾದ ಶ್ರೀಧರ್ ರೈ ಕೊಡಂಬು,,ಪಿ.ಎಸ್.ಭಟ್, ರಕ್ಷಿತಾ, ಪ್ರೀತಾ, ಹಿರಿಯ ವಿದ್ಯಾರ್ಥಿಗಳಾದ ಉಲ್ಲಾಸ್ ಪೈ, ಸುದೇಶ್ ಕುಮಾರ್ ಚಿಕ್ಕ ಪುತ್ತೂರು, ಕಿಶೋರ್ ನೆಲ್ಲಿಕಟ್ಟೆ ಶಾಲಾ ಶಿಕ್ಷಕಿಯರು,ಪೋಷಕರು ಉಪಸ್ಥಿತರಿದ್ದರು.

ಗಣರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಪತ್ರಕರ್ತರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಿಸಲಾಯಿತು.ಉಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನ ನೀಡಲಾಯಿತು.

LEAVE A REPLY

Please enter your comment!
Please enter your name here