ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕ ಇಲ್ಲಿಗೆ ಸುಮಾರು 55000 ಮೌಲ್ಯದ ಬೆಂಚು ಡಸ್ಕುಗಳನ್ನೊಳಗೊಂಡ ಪೀಠೋಪಕರಣ ಹಸ್ತಾಂತರ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಎಸ್ಡಿಎಂಸಿ ಅಧ್ಯಕ್ಷ ನಾರಾಯಣ ಸುವರ್ಣ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಪುಷ್ಪಾವತಿ, ಸೇವಾ ಪ್ರತಿನಿಧಿ ಮೋಕ್ಷಿತ ನರಿಮೊಗರು ಹಾಲು ಒಕ್ಕೂಟ ಸೊಸೈಟಿಯ ಕಾರ್ಯದರ್ಶಿ ಕೃಷ್ಣರಾಜ ಜೈನ್, ಶಿಕ್ಷಣ ಸಂಯೋಜಕ ಅಮೃತ ಕಲಾ ನರಿಮೊಗರು, ಸಮೂಹ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ ಉಪಸ್ಥಿತರಿದ್ದರು.
ಕೊಡುಗೆ ಹಸ್ತಾಂತರದ ಬಳಿಕ, ಮೆಟ್ರಿಕ್ ಮೇಳವನ್ನು ಆಗಮಿಸಿರುವ ಅತಿಥಿಗಳು ಉದ್ಘಾಟಿಸಿದರು. ಈ ಮೇಳದಲ್ಲಿ ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಬೆಳೆದ ಸಾವಯವ ತರಕಾರಿಗಳು ಹಣ್ಣುಗಳು ಸೊಪ್ಪುಗಳು ಮುಂತಾದ ನಿತ್ಯ ಬಳಕೆಯ ವಸ್ತುಗಳ ವ್ಯಾಪಾರ ನಡೆಸಿದರು. ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು ಮಾರ್ಗದರ್ಶನ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಹಿರಿಯ ವಿದ್ಯಾರ್ಥಿಗಳು ಹಾಗೂ ಊರವರು ಪಾಲ್ಗೊಂಡಿದ್ದರು. ಶಿಕ್ಷಕಿ ವಿಶಾಲಾಕ್ಷಿ ಸ್ವಾಗತಿಸಿ, ಪೂರ್ಣಿಮಾ ವಂದಿಸಿದರು. ಮಾಲತಿ ಕಾರ್ಯಕ್ರಮ ನಿರೂಪಿಸಿದರು. ಸೌಮ್ಯ, ನೀತಾ ಸಹಕರಿಸಿದರು.