ಕಾಂಚನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಕಾಂಚನ ಶ್ರೀ ಲಕ್ಷ್ಮೀ ನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸ್ಥಳೀಯ ಪ್ರೌಢಶಾಲೆಗೆ ಇತ್ತೀಚೆಗೆ ಭೇಟಿ ನೀಡಿದರು.
ತರಗತಿಯಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ ಜೊತೆ ಸಂವಾದ ನಡೆಸಿ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. ಹೆಚ್ಚುವರಿ ಕೊಠಡಿಗಳ ನಿರ್ಮಾಣವಾದ ಪ್ರಗತಿ ಕಾರ್ಯವನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು ಖಾವಂದರನ್ನು ಬರಮಾಡಿಕೊಂಡರು.