ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ- ಪುಣಚದಲ್ಲಿ ಭಕ್ತಾದಿಗಳ ಸಭೆ

0

ಪುಣಚ: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾ.27ರಿಂದ ಎ.6ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ಕಾರ್ಯಕ್ರಮಗಳ ಯಶಸ್ವಿಯಾಗಿ ಪುಣಚ ಭಕ್ತಾದಿಗಳ ಸಭೆಯು ಪುಣಚ ಮಹಿಷಮರ್ದಿನಿ ದೇವಸ್ಥಾನದ ವಠಾರದಲ್ಲಿ ಜ.26ರಂದು ನಡೆಯಿತು.

ಮಧೂರು ಕ್ಷೇತ್ರದ ಸಹ ಅರ್ಚಕರು, ಕ್ಷೇತ್ರದ ಬ್ರಹ್ಮವಾಹಕರು ಕೃಷ್ಣಪ್ರಸಾದ್ ಅಡಿಗ ಮಾತನಾಡಿ, ನಿಮ್ಮೆಲ್ಲರ ಪರಿಪೂರ್ಣವಾದ ಸಹಕಾರ ತನು,ಧನ,ಮನಗಳಿಂದ ಸಹಕರಿಸಿ ದೇವತಾ ಕಾರ್ಯದಲ್ಲಿ ಪಾಲ್ಗೊಂಡು ಅತ್ಯಂತ ಉತ್ತಮ ರೀತಿಯಲ್ಲಿ ಬ್ರಹ್ಮಕಲಶೋತ್ಸವ ನಡೆಯುವಲ್ಲಿ ನಿಮ್ಮೆಲ್ಲರ ಸಹಕಾರ ಅಗತ್ಯ ಎಂದರು.

ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಎಸ್.ಆರ್ ರಂಗಮೂರ್ತಿ ಮಾತನಾಡಿ ಮಧೂರು ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ಭಾಗವಹಿಸುವ ಹಾಗೂ ಸೇವೆ ಮಾಡುವ ಅವಕಾಶ ಸಿಕ್ಕಿರುವುದು ನಮ್ಮೆಲ್ಲರ ಸೌಭಾಗ್ಯ. ಆದುದರಿಂದ ಗ್ರಾಮದ ಪ್ರತಿ ಮನೆಯಿಂದಲೂ ಎಲ್ಲರನ್ನು ತೊಡಗಿಸಿಕೊಂಡು ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯದಲ್ಲಿ ಪಾಲ್ಗೊಂಡು ಸಹಕರಿಸುವಂತೆ ತಿಳಿಸಿದರು.

ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಮಧೂರು ಬ್ರಹ್ಮಕಲಶೋತ್ಸವ ಸಮಿತಿ ಸದಸ್ಯರಾದ ಅನಂತರಾಮ, ಯೋಗಿಶ್ ಮಧೂರು ಮಾತನಾಡಿ ಬ್ರಹ್ಮಕಲಶೋತ್ಸವ ಯಶಸ್ವಿಗೆ ಎಲ್ಲರ ಸಹಕಾರ ಕೋರಿದರು.

ಪುಣಚ ಸಮಿತಿ ರಚನೆ:
ಮಧೂರು ಕ್ಷೇತ್ರದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪುಣಚ ಸಮಿತಿ ರಚನೆ‌ ಮಾಡಲಾಯಿತು. ರಾಮಕೃಷ್ಣ ಮೂಡಂಬೈಲು ಸ್ವಾಗತಿಸಿ, ಅಜೇಯ್ ಶಾಸ್ತ್ರೀ ವಂದಿಸಿದರು.

LEAVE A REPLY

Please enter your comment!
Please enter your name here