ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ  VLSI ಡಿಸೈನ್ ಹಾಗೂ ಅದರ ಪ್ರಾಮುಖ್ಯತೆ ಬಗ್ಗೆ ಮಾಹಿತಿ ಕಾರ್ಯಗಾರ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ VLSI ಡಿಸೈನ್ ಹಾಗೂ ಅದರ ಪ್ರಾಮುಖ್ಯತೆ ಬಗ್ಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನದ ಅರಿವನ್ನು ಮೂಡಿಸುವ ಸಲುವಾಗಿ ಮಾಹಿತಿ ಕಾರ್ಯಗಾರ ನಡೆಸಲಾಯಿತು.

ಕಾರ್ಯಕ್ರಮವನ್ನು ನಡೆಸಿಕೊಟ್ಟ ವಿವೇಕಾನಂದ ಪಾಲಿಟೆಕ್ನಿಕ್ ಹಿರಿಯ ವಿದ್ಯಾರ್ಥಿ ಮಹಮ್ಮದ್ ಅಜ್ಮಲ್ – ಟೆಕ್ನಿಕಲ್ ಸಪೋರ್ಟ್ ಇಂಜಿನಿಯರ್ ಅರವಿಂದ್ ಮವಿನ್ ಸಿಲಿಕಾನ್ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಮಾತನಾಡುತ್ತಾ “ಮೊಬೈಲ್ ಲ್ಯಾಪ್ಟಾಪ್ ಗಳಲ್ಲಿ ಬಳಸುವ ಚಿಪ್ ಗಳ ಡಿಸೈನ್” ಯಾವ ರೀತಿ ಮಾಡಲಾಗುತ್ತದೆ ಎಂಬುದನ್ನು ವಿವರಿಸಿದರು. ಹಾಗೂ ವಿದ್ಯಾರ್ಥಿಗಳು ತಮ್ಮ ಮುಂದಿನ ದಿನಗಳಲ್ಲಿ ಕೆಲಸವನ್ನು ಆಯ್ಕೆ ಮಾಡುವಾಗ ಯಾವ ರೀತಿಯ ನಿರ್ಧಾರಗಳನ್ನು ತೆಗೆದುಕೊಂಡು ಮುಂದುವರೆಯಬೇಕು ಎಂಬ ವಿಷಯವಾಗಿ ವಿದ್ಯಾರ್ಥಿಗಳಲ್ಲಿ ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here