ಪುತ್ತೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರಿನಿಂದ 8 ಕಿ.ಮೀ ದೂರದಲ್ಲಿ ಆರ್ಯಾಪು ಗ್ರಾಮದ ಕೂರೇಲು ಮಣ್ಣಿನಲ್ಲಿ ಆರಾಧನೆ ಪಡೆಯುತ್ತಿರುವ ಶ್ರೀ ಉಳ್ಳಾಕುಲು ಉಳ್ಳಾಲ್ತಿ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಶ್ರೀ ದೈವಗಳಿಗೆ ತಂಬಿಲ ಸೇವೆಯು ಜ.30 ರಂದು ನಡೆಯಲಿದೆ.
ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ತಂಬಿಲ ಸೇವೆ ನಡೆಯಲಿದ್ದು ಬೆಳಿಗ್ಗೆ ಗಣಪತಿ ಹೋಮ, ಕಲಶ ಪೂಜೆ, ಕಲಶಾಭಿಷೇಕ ನಡೆದು ತಂಬಿಲ ಸೇವೆಯ ಬಳಿಕ ಮಹಾಪೂಜೆ ನಡೆಯಲಿದೆ. ಬಳಿಕ ಭಕ್ತಾಧಿಗಳಿಗೆ ಪ್ರಸಾದ ವಿತರಣೆ ನಡೆದು ಅನ್ನಸಂತರ್ಪಣೆ ನಡೆಯಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಶ್ರೀ ದೈವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಂಜೀವ ಪೂಜಾರಿ ಕೂರೇಲುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.