ಫೆ.2 ಸಾಂದೀಪನಿ ಕ್ರೀಡಾಂಗಣದಲ್ಲಿ ಒಕ್ಕಲಿಗ ಗೌಡ ಸಂಘದ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ

0

ಪುತ್ತೂರು: ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘ ಮುಂಡೂರು ವಲಯದ ಪ್ರಾಯೋಕತ್ವದೊಂದಿಗೆ ಒಕ್ಕಲಿಗ ಗೌಡ ಮಹಿಳಾ ಸೇವಾ ಸಂಘ ಹಾಗೂ ಒಕ್ಕಲಿಗ ಗೌಡ ಸ್ವ ಸಹಾಯ ಟ್ರಸ್ಟ್‌ನ ಸಹಯೋಗದಲ್ಲಿ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-2025 ಫೆ.2ರಂದು ನರಿಮೊಗರು ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮದ ಪ್ರಾರಂಭದಲ್ಲಿ ಬೆಳಿಗ್ಗೆ 7.30ಕ್ಕೆ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಿಂದ ಕ್ರೀಡಾ ಜ್ಯೋತಿಯು ಹೊರಟು 8.30ಕ್ಕೆ ಸಾಂದೀಪನಿ ಕ್ರೀಡಾಂಗಣಕ್ಕೆ ಆಗಮಿಸಲಿದೆ. ನಂತರ ನಡೆಯುವ ಕಾರ್ಯಕ್ರಮದಲ್ಲಿ ಸಾಂದೀಪನಿ ವಿದ್ಯಾಸಂಸ್ಥೆಗಳ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು ಕ್ರೀಡಾಕೂಟವನ್ನು ಉದ್ಘಾಟಿಲಿದ್ದಾರೆ. ನಂತರ ವಿವಿಧ ಕ್ರೀಡಾ ಕೂಟಗಳು ಪ್ರಾರಂಭಗೊಳ್ಳಲಿದೆ.
ಮಧ್ಯಾಹ್ನ 11.30ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮಿಜಿ ಆಶೀರ್ವಚನ ನೀಡಲಿದ್ದಾರೆ. ಮೈಸೂರಿನ ಮಾಜಿ ಸಂಸದ ಪ್ರತಾಪ ಸಿಂಹ , ಮಾಜಿ ಶಾಸಕ ಸಂಜೀವ ಮಠಂದೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಉದ್ಯಮಿ ನಳಿನಿ ಲೋಕಪ್ಪ ಗೌಡ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಅಮರನಾಥ ಗೌಡ ಬಪ್ಪಳಿಗೆ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮುಂಡೂರು ವಲಯದ ಅಧ್ಯಕ್ಷ ಚೆನ್ನಪ್ಪ ಗೌಡ ಕೋಲಾಡಿ ಅಧ್ಯಕ್ಷತೆ ವಹಿಸಲಿದ್ದಾರೆ.


ಕ್ರೀಡಾಕೂಟದ ಸಮಾರೋಪ ಸಮಾರಂಭವು ಸಂಜೆ 5.30ಕ್ಕೆ ನಡೆಯಲಿದ್ದು ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಘದ ಮಾಜಿ ಅಧ್ಯಕ್ಷ ಮೋಹನ ಗೌಡ ಇಡ್ಯಡ್ಕ ಸಹಿತ ಹಲವು ಮಂದಿ ಗಣ್ಯರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಪುತ್ತೂರು ತಾಲೂಕಿನ ಆರು ವಲಯಗಳ ಸುಮಾರು 600 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಒಕ್ಕಲಿಗ ಗೌಡ ಸೇವಾ ಸಂಘದ ಉಪಾದ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ ಮಾತನಾಡಿ, ಯುವ ಒಕ್ಕಲಿಗ ಗೌಡ ಸೇವಾ ಸಂಘದಿಂದ 2008ರಿಂದ ನಿರಂತರವಾಗಿ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತಿದೆ. ಸಮಾಜದ ಯುವ ಪ್ರತಿಭೆಗಳಿಗೆ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿ, ಕ್ರೀಡಾಸ್ಪೂರ್ತಿ ನೀಡಲಾಗುತ್ತಿದೆ. ಒಗ್ಗಟ್ಟಿನಿಂದ ಸಂಘಟನೆಯ ಮೂಲಕ ಸಮಾಜದ ಅಭಿವೃದ್ಧಿಗೆ ಉತ್ತೇಜನ ನೀಡಲಾಗುವುದು. ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸಮಾಜದ ಸಾಧಕರನ್ನು ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಸುಮಾರು 1500ಕ್ಕೂ ಅಧಿಕ ಮಂದಿ ಬಾಗವಹಿಸಲಿದ್ದಾರೆ ಎಂದರು.


ಮುಂಡೂರು ವಲಯದ ಅಧ್ಯಕ್ಷ ಚೆನ್ನಪ್ಪ ಗೌಡ ಕೋಲಾಡಿ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಗೌಡ ತೆಂಕಿಲ, ಕ್ರೀಡಾ ಸಂಚಾಲಕ ಮೋಹನ ಗೌಡ ನಡುಬೈಲು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here