ಪುತ್ತೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಆಶ್ರಯದಲ್ಲಿ ರಾಜಯೋಗ ಕೇಂದ್ರದ ಲೋಕಾರ್ಪಣಾ ಸಮಾರಂಭ ಫೆ.2ರಂದು ಈಶ್ವರಮಂಗಲದಲ್ಲಿ ನಡೆಯಲಿದೆ.
ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಶ್ರೀಧಾಮ ಮಾಣಿಲ ಅವರು ಉದ್ಘಾಟನೆ ಮತ್ತು ಆಶೀರ್ವಚನ ನೆರವೇರಿಸಲಿದ್ದು, ಕಡಬ ಈಶ್ವರೀಯ ವಿಶ್ವ ವಿದ್ಯಾಲಯದ ಸಂಚಾಲಕರಾದ ಬ್ರಹ್ಮಕುಮಾರಿ ರಾಜಯೋಗಿನಿ ರತ್ನಾವತಿ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ, ಮಂಜುನಾಥ ರೈ ಸಾಂತ್ಯ, ರವಿಶಂಕರ ಬಲಿಪಗುಳಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ.