ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಮೀನಿನ ಮನೆಗಳಲ್ಲಿ ವಾಸ್ತವ್ಯವಿದ್ದವರ ಪೈಕಿ ಮೂವರು ಕೆಲ ದಿನಗಳ ಹಿಂದೆ ದೇವಸ್ಥಾನಕ್ಕೆ ಮನೆಗಳನ್ನು ಬಿಟ್ಟು ಕೊಟ್ಟಿದ್ದು, ಇಂದು ಇಬ್ಬರು ನಿವಾಸಿಗಳು ಮನೆಗಳನ್ನು ದೇವಸ್ಥಾನಕ್ಕೆ ಹಿಂತಿರುಗಿಸಿದರು.
ರೂಪ ಬಿ. ಹಾಗೂ ಜಗದೀಶ್ಚಂದ್ರ ರೈ ಬಿ. ಜಾಗವನ್ನು ದೇವಳಕ್ಕೆ ಹಸ್ತಾಂತರಿಸಿದರು. ಅವರಿಗೆ ದೇವಳದ ಸತ್ಯಧರ್ಮ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪ್ರಸಾದ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅಶೋಕ್ ಕುಮಾರ್ ರೈ, ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ನಳಿನಿ ಪಿ ಶೆಟ್ಟಿ, ದಿನೇಶ್ ಪಿವಿ, ವಿನಾಯಕ ಸುವರ್ಣ ಸಹಿತ ಹಲವರು ಉಪಸ್ಥಿತರಿದ್ದರು.