ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಮಡಿವಾಳ ಮಾಚಿದೇವ ಜಯಂತಿಯನ್ನು ಫೆ.1ರಂದು ತಾಲೂಕು ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಸಭಾಂಗಣದಲ್ಲಿ ನಡೆಯಿತು. ಪ್ರಭಾರ ಸಹಾಯಕ ಆಯುಕ್ತ ಪಿ. ಶ್ರವಣ್ ಕುಮಾರ್ ದೀಪ ಪ್ರಜ್ವಲಿಸಿ ಶುಭ ಹಾರೈಸಿದರು.
ತಹಶೀಲ್ದಾರ್ ಪುರಂದರ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರು ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಶುಭಾಸ್ ಚಂದ್ರ ಪಿ. ಎನ್. ಅತಿಥಿ ಗಳಾಗಿ ಭಾಗವಹಿಸಿದರು. ಉಪತಹಶೀಲ್ದಾರ್ ದಯಾನಂದ ಸ್ವಾಗತಿಸಿದರು. ಉಪತಹಶೀಲ್ದಾರ್ ಸುಲೋಚನಾ ಪಿ. ಕೆ. ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.