ಕೆಮ್ಮಾರ : ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕೆಮ್ಮಾರ ಶಾಲೆಯಲ್ಲಿ 15 ವರ್ಷ ಸೇರಿದಂತೆ ವಿವಿಧ ಶಾಲೆಗಳಲ್ಲಿ 31 ವರ್ಷದ ಸುದೀರ್ಘ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ವೆಂಕಟರಮಣ ಭಟ್ 31-01-25ರಂದು ಸೇವೆಯಿಂದ ವಯೋನಿವೃತ್ತಿ ಹೊಂದಿದರು. ಅವರ ಸೇವಾ ನಿವೃತ್ತಿ ನಿಮಿತ್ತ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಪುತ್ತೂರು ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಅಶ್ರಫ್, ಪಂಚಾಯತ್ ಸದಸ್ಯೆ ವಾರಿಜಾಕ್ಷಿ ಹಾಗೂ ಕೆಮ್ಮಾರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಅಝೀಝ್ ಬಿ.ಕೆ, ಹಿರಿಯ ವಿಧ್ಯಾರ್ಥಿ ಸಂಘದ ಅಧ್ಯಕ್ಷ ಕನಕರಾಜ್, ದ್ವಾರಕ ಕನ್ಸ್ಟ್ರಕ್ಷನ್ ಸೈಟ್ ಸುಪರ್ವೈಸರ್ ಜಗದೀಶ್, ಪಡಿ ಸಂಸ್ಥೆಯ ವತ್ಸಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕೆಮ್ಮಾರ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷೆ ಸೆಲಿಕತ್ ಗುರುಕಾಣಿಕೆ ನೀಡಿ ಗೌರವಿಸಿದರು.
ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ತೇಜಾವತಿ, ಸದಸ್ಯರಾದ ಪದ್ಮನಾಭ ಶೆಟ್ಟಿ, ವಾಮನ ಬರೆಮೇಲು, ಖಾದರ್ ಅಡೆಕ್ಕಲ್, ಯೋಗಿತಾ,ಸುಮಯ್ಯ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಜುನೈದ್, ಪೋಷಕ ವೃಂದದವರು, ಹಿರಿಯ ವಿದ್ಯಾರ್ಥಿಗಳು, ಸೇರಿದಂತೆ ಹಲವರು ಭಾಗಿಯಾಗಿದ್ದರು. ವೆಂಕಟ್ರಮಣ ಭಟ್ ರವರು ತಮ್ಮ ನೆನಪಿಗಾಗಿ ಶಾಲೆಗೆ ಫ್ಯಾನ್ ಕೊಡುಗೆಯಾಗಿ ನೀಡಿದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿ ಸಂದರ್ಭೋಚಿತವಾಗಿ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯಿನಿ ಜಯಶ್ರಿ ಎಂ ಸ್ವಾಗತಿಸಿ, ಸಹಶಿಕ್ಷಕಿ ಲೀನಾ ಲಸ್ರಾಡೋ ವಾಚಿಸಿದರು.ಶಿಕ್ಷಕಿ ಮೆಹನಾಝ್ ಸಹಕರಿಸಿದರು. ಟಿಜಿಟಿ ಶಿಕ್ಷಕಿ ಸುಮನಾ ಕೆ.ಎಸ್ ಕಾರ್ಯಕ್ರಮ ನಿರೂಪಿಸಿ, ಜಿಪಿಟಿ ಶಿಕ್ಷಕಿ ಸಂಧ್ಯಾ ವಂದಿಸಿದರು.