ರಾಮಕುಂಜ: ಫೆ.9ರಿಂದ 13ರ ತನಕ ರಾಮಕುಂಜ ಶ್ರೀ ರಾಮಕುಂಜೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಫೆ.2ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು.
ದೇಸ್ಥಾನದ ಪ್ರಧಾನ ಅರ್ಚಕ ಅನಂತ ಉಡುಪ ಅವರು ಗೊನೆ ಮುಹೂರ್ತ ನಡೆಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುಪ್ರಸಾದ ರಾಮಕುಂಜ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.